ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಗುರುದತ್ತ ಹೆಗಡೆ ಅವರನ್ನು ನೇಮಕ ಮಾಡಲಾಗಿದೆ.
2014ನೇ ಬ್ಯಾಚ್‌ನ ಕರ್ನಾಟಕ ಕೇಡರ್ ಅಧಿಕಾರಿಯಾಗಿರುವ ಗುರುದತ್ತ ಅವರಿಗೆ ಬಿಆರ್‌ಟಿಎಸ್ ಹೊಣೆಗಾರಿಕೆಯನ್ನೂ ವಹಿಸಲಾಗಿದೆ. ಮೊದಲು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೃಷ್ಣ ಬಾಜಪೇಯಿ ಉನ್ನತ ವ್ಯಾಸಂಗಕ್ಕೆ ಸಿಂಗಪುರಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ.
ವಾಯವ್ಯ ಸಾರಿಗೆ ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.