ADVERTISEMENT

ಧಾರವಾಡ ಐಐಟಿ; ₹2 ಸಾವಿರ ಕೋಟಿ ಹೆಚ್ಚುವರಿ ಅನುದಾನ: ಪ್ರಲ್ಹಾದ ಜೋಶಿ

ಸಂವಾದ ಕಾರ್ಯಕ್ರಮ ಸಮಾರೋಪ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 16:06 IST
Last Updated 22 ಜೂನ್ 2025, 16:06 IST
ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ಸಂಘದಿಂದ ಭಾನುವಾರ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಗಣ್ಯರು ಜರ್ನಲ್ ಬಿಡುಗಡೆ ಮಾಡಿದರು
ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ಸಂಘದಿಂದ ಭಾನುವಾರ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಗಣ್ಯರು ಜರ್ನಲ್ ಬಿಡುಗಡೆ ಮಾಡಿದರು   

ಹುಬ್ಬಳ್ಳಿ: ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆಗೆ (ಐಐಟಿ) ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ₹2 ಸಾವಿರ ಕೋಟಿ ನೀಡುತ್ತಿದೆ. ಇತರ ಐಐಟಿಗಳಂತೆ ಇದೂ ಅಭಿವೃದ್ಧಿಯಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. 

ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ಸಂಘದಿಂದ ‘ಭಾರತೀಯ ಶಿಕ್ಷಣ ಮತ್ತು ಶಿಕ್ಷಕರ ನಿಜವಾದ ಪಾತ್ರ’ ಕುರಿತು ಭಾನುವಾರ ಏರ್ಪಡಿಸಿದ್ದ ರಾಷ್ಟ್ರಮಟ್ಟದ ಸಂವಾದ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. 

ದೇಶದಲ್ಲಿ 23 ಐಐಟಿಗಳಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಭಾರತ ಇಂದು ಮುನ್ನಡೆ ಸಾಧಿಸಿದೆ. ಇಂದಿನ ವಿದ್ಯಾರ್ಥಿಗಳಿಗೆ  21ನೇ ಶತಮಾನದ ಅಗತ್ಯಗಳಿಗೆ ಪೂರಕವಾದಂತಹ ಶಿಕ್ಷಣ ಒದಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದರು.

ADVERTISEMENT

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಶೈಕ್ಷಣಿಕ ಸುಧಾರಣಾ ಯೋಜನೆಯಾಗಿದೆ. ಇದು ಭಾರತವನ್ನು ಜಾಗತಿಕ ಜ್ಞಾನದ ಮಹಾಶಕ್ತಿಯನ್ನಾಗಿ ರೂಪಿಸುವ ಗುರಿ ಹೊಂದಿದೆ. ಶಾಲಾ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಸಮಗ್ರ ಮತ್ತು ಬಹು ಶಿಸ್ತೀಯ ಶಿಕ್ಷಣವನ್ನು ಒದಗಿಸುತ್ತದೆ. ಯುವ ಸಮುದಾಯವನ್ನು ಔದ್ಯೋಗಿಕವಾಗಿ ಮನ್ನಡೆಯತ್ತ ಕೊಂಡೊಯ್ಯುತ್ತದೆ ಎಂದು ಹೇಳಿದರು.

2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಕಾರ್ಯಗತಗೊಳಿಸುತ್ತಿದೆ ಎಂದರು.

ಸಮಾರೋಪ ಸಮಾರಂಭದಲ್ಲಿ ಧಾರವಾಡ ಐಐಟಿ ಡೀನ್ ಡಾ.ಎಸ್‌.ಎಂ.ಶಿವಪ್ರಸಾದ ‘21ನೇ ಶನತಮಾನದಲ್ಲಿ ಶಿಕ್ಷಣ’ ವಿಷಯ ಕುರಿತು ಉಪನ್ಯಾಸ ನೀಡಿದರು.

ಮೋತಿಲಾಲ್ ರಾಥೋಡ್, ರಘು ಅಕ್ಕಮಂಚಿ, ಗುರುನಾಥ ಬಡಿಗೇರ, ಸಿ.ವಿ.ಮರಿದೇವರ ಮಠ, ಸಂದೀಪ ಬೂದಿಹಾಳ, ಅನುದಾನಿತ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರು, ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.