ADVERTISEMENT

ಉಪನ್ಯಾಸಕರ ನಿಯೋಜನೆ ರದ್ದು; ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಜುಲೈ 2019, 20:15 IST
Last Updated 21 ಜುಲೈ 2019, 20:15 IST

ಹುಬ್ಬಳ್ಳಿ: ಉತ್ತರ ಕರ್ನಾಟಕ ಮತ್ತು ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ನಿಯಮ ಬಾಹಿರವಾಗಿ ಮಾಡಲಾಗಿರುವ ಉಪನ್ಯಾಸಕರ ನಿಯೋಜನೆ ರದ್ದು ಪಡಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಅವರಿಗೆ ಪತ್ರ ಬರೆದಿರುವ ಅವರು, ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕಾಯಂ ಪೂರ್ವ ಸೇವಾವಧಿ ಘೋಷಣೆ ಆಗದಿದ್ದರೂ ಉತ್ತರ ಕರ್ನಾಟಕ, ಹೈದರಾಬಾದ್‌ ಕರ್ನಾಟಕ ಹಾಗೂ ಕರಾವಳಿ ಕರ್ನಾಟಕ ಭಾಗದ ಸುಮಾರು 200 ಉಪನ್ಯಾಸಕರನ್ನು ದಕ್ಷಿಣ ಕರ್ನಾಟಕಕ್ಕೆ 7 ತಿಂಗಳಲ್ಲಿ 3 ಬಾರಿ ನಿಯೋಜನೆ ಮಾಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಿಯೋಜನೆ ರದ್ದು ಪಡಿಸಿ, ಅಧಿಕಾರಿಗಳಿಗೆ ನಿರ್ದೇಶಿಸಬೇಕು. ಇದಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.