ADVERTISEMENT

ಅಕ್ರಮ ಗಣಿಗಾರಿಕೆ: ವಸೂಲಾತಿ ಕಮಿಷನರ್‌ ನೇಮಕಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 20:53 IST
Last Updated 7 ಸೆಪ್ಟೆಂಬರ್ 2025, 20:53 IST
ಎಸ್‌.ಆರ್‌.ಹಿರೇಮಠ
ಎಸ್‌.ಆರ್‌.ಹಿರೇಮಠ   

ಧಾರವಾಡ: ‘ಅಕ್ರಮ ಗಣಿಗಾರಿಕೆಯಿಂದ ಆಗಿರುವ ನಷ್ಟ ವಸೂಲಾತಿಗೆ (ರಿಕವರಿ) ಕಮಿಷನರ್‌ ನೇಮಿಸಲು ತಕ್ಷಣ ಕ್ರಮ ವಹಿಸಬೇಕು‘ ಎಂದು ಸಮಾಜ ಪರಿವರ್ತನ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌. ಹಿರೇಮಠ ಸರ್ಕಾರಕ್ಕೆ ಒತ್ತಾಯಿಸಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ‘ಗಣಿ ಅಕ್ರಮಗಳ ಪರಿಶೀಲನೆಗೆ ನೇಮಿಸಿದ್ದ ಅಧ್ಯಕ್ಷ ಎಚ್‌.ಕೆ.ಪಾಟೀಲ ಅಧ್ಯಕ್ಷತೆಯ ಸಚಿವ ಸಂಪುಟದ ಉಪಸಮಿತಿಯು ಸರ್ಕಾರಕ್ಕೆ ವರದಿ ನೀಡಿದ್ದು, ಅದರಂತೆ ಸರ್ಕಾರ ಕಾರ್ಯಪ್ರವೃತವಾಗಬೇಕು’ ಎಂದು ಒತ್ತಾಯಿಸಿದರು. 

ಎಸ್‌.ಎಸ್‌.ಮಲ್ಲಿಕಾರ್ಜುನ್‌ ಬದಲಾಯಿಸಿ:

ADVERTISEMENT

ಗಣಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜನ್‌ ಅವರು ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ 13 ಡಂಪ್‌ಗಳನ್ನು ಹರಾಜು ಮಾಡಿಸಿದ್ದಾರೆ. ಸುಪ್ರೀಂ ಕೋರ್ಟ್‌ ಆದೇಶಗಳನ್ನು ಉಲ್ಲಂಘಿಸಿದ್ದಾರೆ ಎಂದು ಎಸ್‌.ಆರ್‌.ಹಿರೇಮಠ ಇದೇ ವೇಳೆ ಆರೋಪಿಸಿದರು.

‘ಎಸ್‌.ಎಸ್‌.ಮಲ್ಲಿಕಾರ್ಜುನ ಅವರನ್ನು ಗಣಿ ಖಾತೆಯಿಂದ ಬದಲಾಯಿಸಬೇಕು. ಪ್ರಾಮಾಣಿಕ ಮತ್ತು ದಕ್ಷ ವ್ಯಕ್ತಿಯನ್ನು ಗಣಿ ಸಚಿವರಾಗಿ ನೇಮಿಸಬೇಕು’ ಎಂದೂ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.