
ಅಡಿಕೆ(ಪ್ರಾತಿನಿಧಿಕ)
ಹುಬ್ಬಳ್ಳಿ: ‘ಹಳೇ ಧಾರವಾಡ ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ ಉದ್ಘಾಟನಾ ಸಮಾರಂಭವನ್ನು ಜ.19 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಮಾವನೂರ ಗ್ರಾಮದಲ್ಲಿನ ಸಂಘದ ಅಧ್ಯಕ್ಷ ಡಿ.ಟಿ. ಪಾಟೀಲ ಅವರ ತೋಟದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಉಪಾಧ್ಯಕ್ಷ ಕೇಶವ ಯಾದವ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದಾರೆ. ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕಾಶಿನಾಥ ಭದ್ರಣ್ಣವರ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೃಷಿ ವಿ.ವಿ ವಿಶ್ರಾಂತ ಕುಲಪತಿ ವಿಠ್ಠಲ ಬೇಣಗಿ, ಕರ್ನಾಟಕ ಸಾಂಬಾರು ಪದಾರ್ಥ ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಬಿ.ಆರ್. ಗಿರೀಶ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಅಜೀತ ಕುಮಾರ ಮಶಾಲಿ, ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷ ಮಾಣಿಕ್ಯ ಚಿಲ್ಲೂರ, ಹಿರಿಯ ನಾಗರಿಕ ಸಂಘದ ಅಧ್ಯಕ್ಷ ಬಿ.ಎ.ಪಾಟೀಲ ಪಾಲ್ಗೊಳ್ಳುವರು’ ಎಂದು ತಿಳಿಸಿದರು.
‘ಧಾರವಾಡ, ಹಾವೇರಿ ಭಾಗದಲ್ಲೂ ಅಡಿಕೆ ಬೆಳೆಗಾರರ ಸಂಖ್ಯೆ ಹೆಚ್ಚಿದೆ. ಸರ್ಕಾರ ಸಾಂಪ್ರದಾಯಿಕ ಅಡಿಕೆ ಬೆಳೆಗಾರರಿಗೆ ನೀಡುವ ಸೌಲಭ್ಯಗಳನ್ನು ಈ ಭಾಗದ ರೈತರಿಗೂ ನೀಡಬೇಕು. ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು, ಸರ್ಕಾರದಿಂದ ಸೌಲಭ್ಯ ಪಡೆಯಲು ಹಾಗೂ ಅಡಿಕೆ ಕೃಷಿ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸಂಘ ಆರಂಭಿಸಲಾಗುತ್ತಿದೆ’ ಎಂದರು.
ಅಧ್ಯಕ್ಷ ಡಿ.ಟಿ. ಪಾಟೀಲ, ಕಾರ್ಯದರ್ಶಿ ಮಹೇಶ ಬೆಳಗಾಂವಕರ, ಖಜಾಂಚಿ ಮಂಜುನಾಥ ಚಟ್ನಿ, ನಾಗರಾಜ ಗಂಜಿಗಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.