ಹುಬ್ಬಳ್ಳಿ: ಇಲ್ಲಿನ ಎಪಿಎಂಸಿ ಆವರಣದಲ್ಲಿರುವ ವಿವಿಧೋದ್ದೇಶ ವಸ್ತು ಪ್ರದರ್ಶನ ಕೇಂದ್ರದಲ್ಲಿ 2026ರ ಏಪ್ರಿಲ್‌ನಲ್ಲಿ ಆಯೋಜಿಸಲು ಉದ್ದೇಶಿಸಲಾದ ‘ಇನ್‌ಕಾಮೆಕ್ಸ್– ಕೈಗಾರಿಕಾ ವಸ್ತು ಪ್ರದರ್ಶನ’ಕ್ಕೆ ಅಗತ್ಯ ತಾಂತ್ರಿಕ ಬೆಂಬಲ ನೀಡುವುದಾಗಿ ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ತಿಳಿಸಿದೆ.
‘ಪ್ರದರ್ಶನದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದ ನಿಯೋಗದೊಂದಿಗೆ ಚರ್ಚಿಸಿದ ಅವರು, ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳು, ಸಾರ್ವಜನಿಕ ವಲಯದ ಉದ್ದಿಮೆಗಳು ಮತ್ತು ದೇಶ– ವಿದೇಶಗಳ ಕಂಪನಿಗಳು ಭಾಗವಹಿಸುವಂತೆ ಪ್ರೋತ್ಸಾಹಿಸುವುದಾಗಿ ತಿಳಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.