ADVERTISEMENT

ಧಾರವಾಡ | ಸ್ವಾತಂತ್ರ್ಯ ಸಮಾನತೆ, ಭ್ರಾತೃತ್ವ ಸಂವಿಧಾನದ ಅಡಿಪಾಯ: ಬಸವರಾಜ ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 5:23 IST
Last Updated 27 ನವೆಂಬರ್ 2025, 5:23 IST
<div class="paragraphs"><p>ಧಾರವಾಡದಲ್ಲಿ ನಡೆದ ಸಂವಿಧಾನ ದಿನಾಚರಣೆ ನಡೆಯಿತು.</p></div>

ಧಾರವಾಡದಲ್ಲಿ ನಡೆದ ಸಂವಿಧಾನ ದಿನಾಚರಣೆ ನಡೆಯಿತು.

   

ಧಾರವಾಡ: ‘ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತಳಹದಿಯಲ್ಲಿ ಸಂವಿಧಾನ ರಚನೆಯಾಗಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಆಶಯಗಳನ್ನು ತಿಳಿದುಕೊಳ್ಳಬೇಕು’ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಬುಧವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದರು.

ADVERTISEMENT

‘ಸಂವಿಧಾನವು ಕೇವಲ ಕಾನೂನಿನ ಪುಸ್ತಕವಲ್ಲ. ಅದು ದೇಶದ ಆತ್ಮ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಜೊತೆಗೆ ಸಂವಿಧಾನ ವಿಧಿಸಿರುವ ನಿಯಮಗಳು, ಕರ್ತವ್ಯಗಳನ್ನು ಪಾಲಿಸಬೇಕು. ದೇಶದ ಐಕ್ಯತೆ ಮತ್ತು ಸಮಗ್ರತೆಯನ್ನು ಕಾಪಾಡಬೇಕು’ ಎಂದರು.

‘ಅಂಬೇಡ್ಕರ್ ಅವರ ಹೋರಾಟ, ಶಿಕ್ಷಣ ಮತ್ತು ಸಾಧನೆಗಳು ಎಲ್ಲರಿಗೂ ಸ್ಫೂರ್ತಿಯಾಗಿವೆ. ಅಂಬೇಡ್ಕರ್ ಅವರಂಥ ಮಹಾನ್ ಚೇತನವನ್ನು ಜಗತ್ತಿಗೆ ನೀಡಿದ ಅವರ ತಾಯಿ ಭೀಮಾಬಾಯಿ ಅವರನ್ನು ಸ್ಮರಿಸಬೇಕು’ ಎಂದರು.

ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭಾ ಇದ್ದರು.

ಧಾರವಾಡದಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಿತು
ಅಂಬೇಡ್ಕರ್ ಅವರ ವೈಚಾರಿಕ ನಿಲುವುಗಳು ಸಮಾನತೆಯ ತತ್ವಗಳನ್ನು ಅಳವಡಿಸಿಕೊಂಡರೆ ನಿಜವಾದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ರಾಷ್ಟ್ರ ಕಟ್ಟಲು ಸಾಧ್ಯ
ಎನ್.ಎಚ್.ಕೋನರೆಡ್ಡಿ ಶಾಸಕ
ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಿಳಿಯಲು ವಿದ್ಯಾರ್ಥಿಗಳು ಸಂವಿಧಾನವನ್ನು ಓದಬೇಕು ಮತ್ತು ಅರ್ಥಮಾಡಿಕೊಳ್ಳಬೇಕು. ಬಿ.ಆರ್.ಅಂಬೇಡ್ಕರ್ ಅವರು ಭಾರತಕ್ಕೆ ಮಾತ್ರವಲ್ಲ ವಿಶ್ವಕ್ಕೇ ಜ್ಞಾನದ ಸಂಕೇತವಾಗಿದ್ದಾರೆ
ದಿವ್ಯಪ್ರಭು ಜಿಲ್ಲಾಧಿಕಾರಿ

ಸಂವಿಧಾನ ಜಾಗೃತಿ ಜಾಥಾ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹಮದ್‌ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ ನಿಡಿದರು. ಜಾಥಾವು ಕೋರ್ಟ್ ವೃತ್ತ ಜುಬ್ಲಿ ವೃತ್ತ ಮಾರ್ಗವಾಗಿ ಹಾದು. ಪಾಟೀಲ ಪುಟ್ಟಪ್ಪ ಸಭಾಭವನ ತಲುಪಿತು.

‘ಸಂವಿಧಾನದ ಮೌಲ್ಯ ಜೀವನ ಭಾಗವಾಗಲಿ’ 
ನಮ್ಮ ಸಶಕ್ತ ಸಂವಿಧಾನದಿಂದ ಭಾರತವು ಜಾಗತಿಕ ಮಟ್ಟದಲ್ಲಿ ಗಮನಾರ್ಹ ಸ್ಥಾನ ಗಳಿಸಿದ್ದು ಸಂವಿಧಾನದ ಮೌಲ್ಯಗಳು ನಿತ್ಯ ಜೀವನದ ಭಾಗವಾಗಬೇಕು’ ಎಂದು ಡಯಟ್ ಪ್ರಾಚಾರ್ಯ ಗಿರೀಶ ಪದಕಿ ಹೇಳಿದರು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಬುಧವಾರ ನಡೆದ ರಾಷ್ಟ್ರೀಯ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಸಂವಿಧಾನದಲ್ಲಿರುವ ನ್ಯಾಯ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಹಾಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಎಲ್ಲರೂ ತಿಳಿದುಕೊಳ್ಳಬೇಕು’ ಎಂದರು. ಉಪಪ್ರಾಚಾರ್ಯ ಜೆ.ಜಿ.ಸೈಯದ್ ಡಿವೈಪಿಸಿ ಎಸ್‍ಎಂ ಹುಡೇದಮನಿ ಎಪಿಸಿಒ ಪ್ರದೀಪ ರಾಠೋಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.