ADVERTISEMENT

ಚೀನಾ ಹಿತ ಕಾಯಲು ಕಾಂಗ್ರೆಸ್ ಬದ್ಧವೇ: ಸಚಿವ ಪ್ರಲ್ಹಾದ ಜೋಶಿ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2025, 8:33 IST
Last Updated 26 ಫೆಬ್ರುವರಿ 2025, 8:33 IST
<div class="paragraphs"><p>ಪ್ರಲ್ಹಾದ ಜೋಶಿ,</p></div>

ಪ್ರಲ್ಹಾದ ಜೋಶಿ,

   

ಹುಬ್ಬಳ್ಳಿ: ಕಾಂಗ್ರೆಸ್‌ನ ಸ್ಯಾಮ್ ಪಿತ್ರೋಡ ವಿದೇಶದಲ್ಲಿದ್ದುಕೊಂಡು ಭಾರತದ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಚೀನಾ ರಾಯಭಾರಿ ಜೊತೆ ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್, ಚೀನಾ ಹಿತ ಕಾಯಲು ಬದ್ಧವೇ ಅಥವಾ ಭಾರತದ ಹಿತ ಕಾಯಲು ಬದ್ಧವೇ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಅವರನ್ನಾದರೂ ನೋಡಿ ಸರಿಯಾಗಿ ಮಾತನಾಡುವುದನ್ನು ಕಲಿಯಲಿ. ದುರಂಹಕಾರದ ವರ್ತನೆ ಒಳ್ಳೆಯದಲ್ಲ ಎಂದು ಟೀಕಿಸಿದರು.

ADVERTISEMENT

ಅಭಿವೃದ್ಧಿ ಕುರಿತು ಹೇಳಿಕೆ ನೀಡಿದ ಉದ್ಯಮಿಗಳನ್ನು ಅವಮಾನಿಸುವ ಮೂಲಕ ಅವರನ್ನು ಮಾನಸಿಕವಾಗಿ ಕುಗ್ಗಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದರು.

'ಉಚಿತ' ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಎಲ್ಲ ಸರಕು, ಸೇವೆಗಳ ದರ ಹೆಚ್ಚಿಸಿದೆ. ವಿದ್ಯುತ್ ಸಮಸ್ಯೆ ವಿಪರೀತವಾಗಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಸಾಯಲೂ ಹಣ ನೀಡಬೇಕಾದ ಪರಿಸ್ಥಿತಿ ಇದೆ ಎಂದು ಕುಟುಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.