ADVERTISEMENT

ಐ.ಟಿ ಪಾರ್ಕ್‌ ಸಂಕೀರ್ಣ: ಮೂಲಸೌಕರ್ಯಕ್ಕೆ ಶೀಘ್ರ ಕ್ರಮ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 14:56 IST
Last Updated 23 ನವೆಂಬರ್ 2020, 14:56 IST
ಹುಬ್ಬಳ್ಳಿಯ ಕಿಯೋನಿಕ್ಸ್ ತರಬೇತಿ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ವ್ಯವಸ್ಥಾಪಕ ನಿರ್ದೇಶಕ ಎಸ್‌.ಎನ್. ಸಿದ್ದರಾಮಪ್ಪ, ತರಬೇತಿ ಕೇಂದ್ರದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು
ಹುಬ್ಬಳ್ಳಿಯ ಕಿಯೋನಿಕ್ಸ್ ತರಬೇತಿ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ವ್ಯವಸ್ಥಾಪಕ ನಿರ್ದೇಶಕ ಎಸ್‌.ಎನ್. ಸಿದ್ದರಾಮಪ್ಪ, ತರಬೇತಿ ಕೇಂದ್ರದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು   

ಹುಬ್ಬಳ್ಳಿ: ‘ನಗರದ ಐಟಿ ಪಾರ್ಕ್ ಸಂಕೀರ್ಣಕ್ಕೆ ಮೂಲಸೌಕರ್ಯ ಒದಗಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ (ಕಿಯೋನಿಕ್ಸ್) ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ಸಿದ್ದರಾಮಪ್ಪ ಭರವಸೆ ನೀಡಿದರು.

ನಗರದ ಐಟಿ ಪಾರ್ಕ್‌ನಲ್ಲಿರುವ ಕಿಯೋನಿಕ್ಸ್ ಕಚೇರಿಗೆ ಸೋಮವಾರ ಭೇಟಿ ನೀಡಿ ತರಬೇತಿ ಚಟುವಟಿಕೆಗಳನ್ನು ವೀಕ್ಷಿಸಿದ ಅವರು, ಐಟಿ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಬಾಡಿಗೆದಾರರೊಂದಿಗೆ ಮಾತನಾಡಿದರು.

‘ಸಂಕೀರ್ಣದ ನಿರ್ವಹಣೆಯ ಜವಾಬ್ದಾರಿಯನ್ನು ಸರ್ಕಾರ ಇತ್ತೀಚೆಗೆ ಕಿಯೋನಿಕ್ಸ್‌ಗೆ ವಹಿಸಿದೆ. ವಾಹನ ನಿಲುಗಡೆ, ಸ್ವಚ್ಛತೆ ನಿರ್ವಹಣೆ, ವಿದ್ಯುತ್ ಪೂರೈಕೆ, ಭದ್ರತೆ ಸೇರಿದಂತೆ ಇತರ ಸೌಕರ್ಯಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಇಡೀ ಕಟ್ಟಡಕ್ಕೆ ಹೊಸ ರೂಪ ನೀಡಲಾಗುವುದು’ ಎಂದರು.

ADVERTISEMENT

ಕಿಯೋನಿಕ್ಸ್ ಸಹಾಯಕ ವ್ಯವಸ್ಥಾಪಕಿ ಆವಟಿ, ಶೌಕತ್ ಅಲಿ ಮುಲ್ಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.