ADVERTISEMENT

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ: ನೀರಲಕೇರಿ ಬೇಸರ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 4:38 IST
Last Updated 2 ನವೆಂಬರ್ 2025, 4:38 IST
<div class="paragraphs"><p>ಪಿ.ಎಚ್. ನೀರಲಕೇರಿ</p></div>

ಪಿ.ಎಚ್. ನೀರಲಕೇರಿ

   

ಧಾರವಾಡ: ‘ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮಾಡಿದೆ. ನೆಪ ಮಾತ್ರಕ್ಕೆ ಕೆಲ ಜಿಲ್ಲೆಗೆ ಪ್ರಾತಿನಿಧ್ಯ ಕೊಡಲಾಗಿದೆ’ ಎಂದು ಮುಖಂಡ ಪಿ.ಎಚ್. ನೀರಲಕೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಗದಗ, ಧಾರವಾಡ, ಹಾವೇರಿ, ಉತ್ತರಕನ್ನಡ ಇತರ ಜಿಲ್ಲೆಗಳಿಗೆ ಅನ್ಯಾಯವಾಗಿದೆ. ಮೈಸೂರು ಮತ್ತು ಕೊಪ್ಪಳ ಜಿಲ್ಲೆಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಲಾಗಿದೆ’ ಎಂದು ದೂರಿದ್ಧಾರೆ.

ADVERTISEMENT

ಧಾರವಾಡ ಜಿಲ್ಲೆಯ ಸಾಹಿತ್ಯ, ಸಂಗೀತ, ಸಾಮಾಜಿಕ ಕ್ಷೇತ್ರದವರನ್ನು ಪರಿಗಣಿಸಿಲ್ಲ. ಗದಗ ಜಿಲ್ಲೆಗೆ ನೀಡಿಲ್ಲ. ವಕೀಲರಪರಿಗಣನೆಯೇ ಇಲ್ಲ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಮಾನದಂಡಗಳೇನು?’ ಎಂದು ಪ್ರಶ್ನಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.