ಹುಬ್ಬಳ್ಳಿ:ಡ್ರಗ್ಸ್ ಪ್ರಕರಣದಡಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಜೊತೆ ತೆಗೆಸಿಕೊಂಡಿದ್ದಫೋಟೊಗಳನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದ ಕಾಂಗ್ರೆಸ್ ಮುಖಂಡಗಿರೀಶ ಗದಿಗೆಪ್ಪಗೌಡರ ಅವರನ್ನು ಸಿಸಿಬಿ ಪೊಲೀಸರು ಭಾನುವಾರ ವಿಚಾರಣೆಗೆ ಒಳಪಡಿಸಿದರು.
‘ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗದಿಗೆಪ್ಪಗೌಡರ ಹುಬ್ಬಳ್ಳಿಯಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಟೂರ್ನಿಯ ವೇಳೆ ರಾಗಿಣಿ ಜೊತೆ ಫೋಟೊಗಳನ್ನು ತೆಗೆಸಿಕೊಂಡಿದ್ದರು. ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ವಿವಾದ ಬೆಳಕಿಗೆ ಬರುತ್ತಿದ್ದಂತೆ ಫೋಟೊಗಳನ್ನು ಸಾಮಾಜಿಕ ತಾಣದಿಂದ ಅಳಿಸಿ ಹಾಕಿದ್ದರು. ಈ ಸಂಶಯದ ಹಿನ್ನೆಲೆಯಲ್ಲಿ ವಿಚಾರಣೆ ಮಾಡಲಾಗಿದೆ, ಒಂದಷ್ಟು ದಾಖಲೆಗಳನ್ನು ಕೊಡುವಂತೆ ಸೂಚಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.