ADVERTISEMENT

ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು: ಸಿ.ಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 0:00 IST
Last Updated 8 ಡಿಸೆಂಬರ್ 2025, 0:00 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ನವಲಗುಂದ (ಧಾರವಾಡ ಜಿಲ್ಲೆ): 'ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ವರ್ಗ ವ್ಯವಸ್ಥೆ, ಜಾತಿ ಪದ್ಧತಿ ನಿರ್ಮೂಲನೆ ಆಗಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಇಲ್ಲಿ ಹೇಳಿದರು.

ಪಟ್ಟಣದಲ್ಲಿ ಶಾಸಕ ಕೋನರೆಡ್ಡಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘12ನೇ ಶತಮಾನದಲ್ಲಿ ಬಸವಣ್ಣನವರು ಅಂತರ್ಜಾತಿ ವಿವಾಹ ಮಾಡಿಸಿದ್ದರು. ಅಂತರ್ಜಾತಿ ವಿವಾಹ ಪ್ರೋತ್ಸಾಹಿಸಬೇಕು. ಶೂದ್ರ ವ್ಯವಸ್ಥೆ ಮತ್ತು ಅಸ್ಪೃಶ್ಯತೆ ಇವೆಲ್ಲವೂ ನಿವಾರಣೆಯಾಗಬೇಕು’ ಎಂದರು.

ADVERTISEMENT

‘ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 75 ಜೋಡಿಗಳು ದಾಂಪತ್ಯಕ್ಕೆ ಕಾಲಿಟ್ಟಿವೆ. ಹಿಂದೂ, ಮುಸ್ಲಿಂ ಸಹಿತ ವಿವಿಧ ಸಮುದಾಯಗಳ ಜೋಡಿಗಳಿವೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌, ಬೌದ್ಧ, ಜೈನ ಸಹಿತ ಎಲ್ಲ ಸಮುದಾಯವರು ಸಹಬಾಳ್ವೆ ನಡೆಸಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.