ಹುಬ್ಬಳ್ಳಿ: ‘ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಗೆದ್ದ ವಿಜಯೋತ್ಸವದ ಸಂಭ್ರಮವನ್ನು ಬೆಂಗಳೂರಿನಲ್ಲಿ ಆಚರಿಸುವ ವೇಳೆ ಜನರನ್ನು ನಿಯಂತ್ರಿಸುವಲ್ಲಿ ಸರಿಯಾದ ಕಾರ್ಯ ಯೋಜನೆ ರೂಪಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ದೂರಿದ್ದಾರೆ.
‘ಘಟನೆಯಲ್ಲಿ 11 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಇದು ಅಪಘಾತವಲ್ಲ. ಕಾಂಗ್ರೆಸ್ ಸರ್ಕಾರ ತನ್ನ ರಾಜಕೀಯ ಲಾಭಕ್ಕಾಗಿ ಆರ್‌ಸಿಬಿ ಗೆಲುವನ್ನು ದುರುಪಯೋಗ ಪಡಿಸಿಕೊಳ್ಳುವ ಪ್ರಯತ್ನದ ದುಷ್ಪರಿಣಾಮವಾಗಿದೆ’ ಎಂದು ಆರೋಪಿಸಿದ್ದಾರೆ.
‘ನೆಚ್ಚಿನ ಆಟಗಾರರನ್ನು ನೋಡಲು ಲಕ್ಷಾಂತರ ಜನ ಬರುತ್ತಾರೆ ಎಂಬ ನಿರೀಕ್ಷೆ ಇದ್ದರೂ ಸಹ ಸರಿಯಾದ ಮುನ್ನೆಚ್ಚರಿಕೆ ಕ್ರಮಕೈಗೊಂಡಿಲ್ಲ. ತುರ್ತು ಸೇವೆಯನ್ನೂ ನಿಯೋಜನೆ ಮಾಡದೇ ಸರ್ಕಾರವು ಮೈಮರೆತ ಕಾರಣ ಸಾವು– ನೋವುಗಳಾಗಿವೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.