ADVERTISEMENT

ಹುಬ್ಬಳ್ಳಿ | ಲಾಕ್‌ಡೌನ್ ಪರಿಶೀಲಿಸಿದ ಸಚಿವ ಜಗದೀಶ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 19 ಜುಲೈ 2020, 13:51 IST
Last Updated 19 ಜುಲೈ 2020, 13:51 IST
ಕೇಶ್ವಾಪುರ ವೃತ್ತಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಪೊಲೀಸರೊಂದಿಗೆ ಮಾತನಾಡಿದರು
ಕೇಶ್ವಾಪುರ ವೃತ್ತಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಪೊಲೀಸರೊಂದಿಗೆ ಮಾತನಾಡಿದರು   

ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು, ಭಾನುವಾರ ನಗರದ ವಿವಿಧ ಸ್ಥಳಗಳಿಗೆ ಭೇಟಿ ಲಾಕ್‌ಡೌನ್ ಜಾರಿಯನ್ನು ಪರಿಶೀಲಿಸಿದರು.

ಕೇಶ್ವಾಪುರ ವೃತ್ತ, ಗದಗ ರಸ್ತೆ, ಸಿಬಿಟಿ, ದುರ್ಗದ ಬೈಲ್, ಹೊಸೂರು, ಕಾರವಾರ ರಸ್ತೆ, ಗೋಕುಲ ರಸ್ತೆ, ಚಾಣಕ್ಯಪುರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚರಿಸಿದ ಅವರು, ಕರ್ತವ್ಯನಿರತ ಪೊಲೀಸರೊಂದಿಗೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು.

ನಂತರ ಸರ್ಕ್ಯೂಟ್ ಹೌಸ್‌ನಲ್ಲಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರೊಂದಿಗೆ ಕೋವಿಡ್–19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.