ADVERTISEMENT

ಲಂಚ ಪಡೆದ ಪ್ರಕರಣ; ಭೂಮಾಪಕ ಅಧಿಕಾರಿಗೆ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2023, 4:22 IST
Last Updated 27 ಏಪ್ರಿಲ್ 2023, 4:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಧಾರವಾಡ: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದ ಹುಬ್ಬಳ್ಳಿಯ ಭೂಮಾಪಕ ಅಧಿಕಾರಿಗೆ ಧಾರವಾಡದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ ನ್ಯಾಯಾಲಯ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಆದೇಶಿಸಿದೆ.

2018ರಲ್ಲಿ ಹುಬ್ಬಳ್ಳಿಯ ಮಿನಿ ವಿಧಾಸೌಧದಲ್ಲಿನ ದಾಖಲೆಗಳ ಉಪ ನಿರ್ದೇಶಕರ ಕಚೇರಿಯಲ್ಲಿ ಭೂಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ ಡವಳಗಿ ಎಂಬ ಅಧಿಕಾರಿ, ಜಮೀನೊಂದರ ದಾಖಲೆ ಸರಿಪಡಿಲು ₹4 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ತನಿಖೆ ಮಾಡಿದ್ದ ಲೋಕಾಯುಕ್ತ ಹಾಗೂ ಎಸಿಬಿ ಪೊಲೀಸ್‌ ಠಾಣೆ ಪೊಲೀಸರು, ಆರೋಪಿ ಅಧಿಕಾರಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶ ಎನ್. ಸುಬ್ರಮಣ್ಯ ಅವರು, ಆರೋಪಿ ರಮೇಶ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ಅಭಿಪ್ರಾಯಪಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.