ADVERTISEMENT

ಹುಬ್ಬಳ್ಳಿ: ಜನಾಶೀರ್ವಾದ ಯಾತ್ರೆಗೆ ಸಚಿವ ರಾಜೀವ್ ಚಂದ್ರಶೇಖರ್ ಚಾಲನೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 3:10 IST
Last Updated 16 ಆಗಸ್ಟ್ 2021, 3:10 IST
ಗೋಪೂಜೆ ನೆರವೇರಿಸಿದ ರಾಜೀವ ಚಂದ್ರಶೇಖರ್
ಗೋಪೂಜೆ ನೆರವೇರಿಸಿದ ರಾಜೀವ ಚಂದ್ರಶೇಖರ್   

ಹುಬ್ಬಳ್ಳಿ: ಜನಾಶೀರ್ವಾದ ಯಾತ್ರೆಗೆ ಬಂದಿರುವ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್ ಅವರು ಇಲ್ಲಿನ ಸಿದ್ಧಾರೂಢ ಮಠಕ್ಕೆ ಸೋಮವಾರ ಬೆಳಿಗ್ಗೆ ಭೇಟಿ ನೀಡಿದರು.

ಮಠದ ಗೋಶಾಲೆಯಲ್ಲಿ ಗೋಪೂಜೆ ನೆರವೇರಿಸಿದ ಅವರು, ಉಭಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಮಠದ ಟ್ರಸ್ಟ್ ಕಮಿಟಿಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಮಠದ ಟ್ರಸ್ಟ್ ಕಮಿಟಿ ಅಧ್ಯಕ್ಷ ಡಿ.ಡಿ. ಮಾಳಗಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಮುಖಂಡರಾದ ರಂಗಾಬದ್ದಿ, ಗೋಪಾಲ ಬದ್ದಿ, ಬಸವರಾಜ ಕುಂದಗೋಳಮಠ, ಪ್ರಭು ನವಲಗುಂದಮಠ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.