
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ಇಲ್ಲಿನ ಅರವಿಂದ ನಗರದ ಬಳಿ ನಿರ್ಮಾಣವಾಗುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ₹100 ಕೋಟಿ ಬಿಡುಗಡೆ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಕಾಮಗಾರಿ ಆರಂಭವಾಗಿ ಮೂರು ವರ್ಷಗಳಾಗಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬವಾದರೆ ಯೋಜನಾ ವೆಚ್ಚ ಇನ್ನೂ ಹೆಚ್ಚುತ್ತದೆ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.