
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ಇಲ್ಲಿನ ಬೈರಿದೇವರಕೊಪ್ಪದ ಸಾರ್ವಜನಿಕ ಸ್ಥಳದಲ್ಲಿರುವ ದರ್ಗಾದ ಒಂದು ಭಾಗ ಹಾಗೂ ಕೆಲವು ವಾಣಿಜ್ಯ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯಾಚರಣೆ ಬೆಳ್ಳಂಬೆಳಿಗ್ಗೆ ಆರಂಭವಾಗಿದೆ.
ಮುಂಜಾಗ್ರತಾ ಕ್ರಮವಾಗಿ ದರ್ಗಾದ ಸುತ್ತಮುತ್ತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹುಬ್ಬಳ್ಳಿ–ಧಾರವಾಡ ಸೇರಿದಂತೆ ಉತ್ತರ ಕನ್ನಡ, ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ಕರೆಸಿಕೊಳ್ಳಲಾಗಿದೆ.
ಹುಬ್ಬಳ್ಳಿ-ಧಾರವಾಡ ಮುಖ್ಯರಸ್ತೆಯನ್ನು ಹುಬ್ಬಳ್ಳಿ ಕಡೆಯಿಂದ ಬೈರಿದೇವರಕೊಪ್ಪ ಮತ್ತು ಧಾರವಾಡ ಕಡೆಯಿಂದ ಎಪಿಎಂಸಿ ಮೊದಲ ಗೇಟ್ ಬಳಿ ಬಂದ್ ಮಾಡಲಾಗಿದೆ. ಒಳ ರಸ್ತೆಗಳ ಮೂಲಕ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.