ADVERTISEMENT

ಮೈತ್ರಿ ಮುಖಂಡರ ನಡುವೆ ಕಚ್ಚಾಟ ಉಲ್ಬಣ, ಪರಿಣಾಮ ಏನಾದರೂ ಆಗಬಹುದು: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 5 ಮೇ 2019, 10:23 IST
Last Updated 5 ಮೇ 2019, 10:23 IST
   

ಹುಬ್ಬಳ್ಳಿ: ಲೋಕಸಭೆ ಮತ್ತು ಉಪ ಚುನಾವಣೆ ಫಲಿತಾಂಶ ಬಂದ ಬಳಿಕ ಕಾಂಗ್ರೆಸ್, ಜೆಡಿಎಸ್ ಮುಖಂಡರ ನಡುವೆ ಕಚ್ಚಾಟ ಉಲ್ಬಣವಾಗಲಿದ್ದು, ಪರಿಣಾಮ ಏನಾದರೂ ಆಗಬಹುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ 20ಕ್ಕೂ ಹೆಚ್ಚು ಶಾಸಕರುಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ಎದುರಾಗಿರುವ ಎರಡು ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ಗೋವಿಂದ ಕಾರಜೋಳ ಮಾತನಾಡಿ, ಕುಂದಗೋಳ, ಚಿಂಚೋಳಿ ವಿಧಾನ ಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿದರು.

ADVERTISEMENT

ಕೆ.ಎಸ್.ಈಶ್ಬರಪ್ಪ ಮಾತನಾಡಿ, ಚುನಾವಣಾ ಫಲಿತಾಂಶದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಚಿಂದಿ ಚಿತ್ರಾನ್ನ ಆಗಲಿದೆ ಎಂದು ಭವಿಷ್ಯ ನುಡಿದರು. ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಅವರೇ ವಿಲನ್ ಆಗಿದ್ದಾರೆ ಎಂದರು.

ಮಹದಾಯಿ ವಿವಾದ ಇತ್ಯಾರ್ಥಕ್ಕೆ ಕೇಂದ್ರ ಮುಂದಾಗದಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಾಸಕರಾದ ಬಸವರಾಜ ಬೊಮ್ಮಾಯಿ, ಸಿ.ಸಿ.ಪಾಟೀಲ ಸಿಡಿಮಿಡಿಗೊಂಡರು.ಈ ವಿಷಯವಾಗಿ ಪತ್ರಕರ್ತರೊಂದಿಗೆ ತುರಿಸಿನ ವಾಗ್ವಾದ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.