ADVERTISEMENT

ರಸ್ತೆ ದುರಸ್ತಿಗೆ ಆಗ್ರಹ: ಉಪವಾಸದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 5:47 IST
Last Updated 30 ಜುಲೈ 2022, 5:47 IST

ಹುಬ್ಬಳ್ಳಿ: ‘ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ಹತ್ತು ದಿನದ ಒಳಗೆ ದುರಸ್ತಿ ಮಾಡಬೇಕು. ಇಲ್ಲದಿದ್ದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ಮುಂದೆ ಪಕ್ಷದ ಕಾರ್ಯಕರ್ತರೊಂದಿಗೆ ಉಪವಾಸ ಧರಣಿ ಆರಂಭಿಸಲಾಗುವುದು’ ಎಂದು ನಗರದ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ರಾಜು ನಾಯಕವಾಡಿ ಎಚ್ಚರಿಸಿದರು.

‘ಸ್ಮಾರ್ಟ್ ಸಿಟಿ ಯೋಜನೆ ಹೆಸರಲ್ಲಿ ಹುಬ್ಬಳ್ಳಿ ಅಭಿವೃದ್ಧಿಗೆ ನೂರಾರು ಕೋಟಿ ಅನುದಾನ ಬಂದಿದೆ. ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅನುದಾನ ಪಡೆಯಲಾಗಿದೆ. ಆದರೂ, ರಸ್ತೆಗಳು ಹದಗೆಟ್ಟಿವೆ. ಸಮಸ್ಯೆಗಳ ಬಗ್ಗೆ ದೂರು ನೀಡಿದರೆ ಅಧಿಕಾರಿಗಳು ಸ್ಪಂದಿಸುವುದಿಲ್ಲ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ‌ ಮತ್ತು ಶಾಸಕ ಜಗದೀಶ ಶೆಟ್ಟರ್ ಅವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ರಸ್ತೆಗಳು ಹದಗೆಟ್ಟಿರುವುದು ದುರದೃಷ್ಟಕರ. ಕಮಿಷನ್ ಹೆಸರಿನಲ್ಲಿ ಸಾರ್ವಜನಿಕರ ಹಣವನ್ನು ಲೂಟಿ‌ ಮಾಡುವುದರಲ್ಲಿ ಸರ್ಕಾರ ನಿರತವಾಗಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ನೆಲ ಕಚ್ಚಲಿದೆ’ ಎಂದರು.

ADVERTISEMENT

ಸರಸ್ವತಿ ಕಟ್ಟಿಮನಿ, ಕಿರಣ ಜಿತೂರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.