ADVERTISEMENT

ಬೆಳೆಹಾನಿ: ಶೀಘ್ರ ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 16:13 IST
Last Updated 11 ಆಗಸ್ಟ್ 2022, 16:13 IST
ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಶೀಘ್ರ ಪರಿಹಾರ ವಿತರಿಸುವಂತೆ ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ನಗರದ ಮಿನಿ ವಿಧಾನಸೌಧದಲ್ಲಿ ಗುರುವಾರ ತಹಶೀಲ್ದಾರ್‌ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು
ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಶೀಘ್ರ ಪರಿಹಾರ ವಿತರಿಸುವಂತೆ ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ನಗರದ ಮಿನಿ ವಿಧಾನಸೌಧದಲ್ಲಿ ಗುರುವಾರ ತಹಶೀಲ್ದಾರ್‌ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು   

ಹುಬ್ಬಳ್ಳಿ: ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಶೀಘ್ರ ಪರಿಹಾರ ವಿತರಿಸುವಂತೆ ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ನಗರದ ಮಿನಿ ವಿಧಾನಸೌಧದ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

‘ಹೆಸರು ಬೆಳೆಗೆ ವಿಮೆ ತುಂಬಿಸಿಕೊಳ್ಳುವ ಅವಧಿ ವಿಸ್ತರಿಸಬೇಕು. ಹಾನಿಯಾದ ಹೆಸರು ಬೆಳೆಗೆ ಎಕರೆಗೆ ₹25,000 ಪರಿಹಾರ ನೀಡಬೇಕು. ಹಾನಿಗೊಂಡ ಮನೆಗಳಿಗೆ ಪರಿಹಾರ ವಿತರಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ಸರ್ಕಾರ ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಹೊಸಕೇರಿ, ಹುಬ್ಬಳ್ಳಿ ಸೆಂಟ್ರಲ್‌ ಘಟಕದ ಅಧ್ಯಕ್ಷ ರಾಜು ನಾಯಕವಾಡಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ, ಗಂಗಾಧರ ಪೆರೂರ, ಸುಭಾಸ ಅವ್ವನ್ನವರ, ಮಹಾಂತೇಶ ಗಂಗಾಧರಮಠ, ಸರಸ್ವತಿ ಕಟ್ಟಿಮನಿ, ಎಸ್.ಸಿ. ಗಾಮನಗಟ್ಟಿ, ಎಸ್.ಆರ್.ಪಾಟೀಲ, ವೀರೇಶ ಕುಂಬಾರ, ಗೂಳಬ್ಬ ಹಬ್ಬಣ್ಣವರ, ಮಂಜುನಾಥ ಹಡಪದ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.