ADVERTISEMENT

ತೈಲ ಬೆಲೆ ಏರಿಕೆ: ಜೆಡಿಎಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 8:26 IST
Last Updated 13 ಏಪ್ರಿಲ್ 2022, 8:26 IST
   

ಹುಬ್ಬಳ್ಳಿ: ತೈಲ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಹುಧಾ ಮಹಾನಗರ ಜಿಲ್ಲಾ ಜೆಡಿಎಸ್ ಘಟಕದ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಮೂರ್ತಿಯನ್ನು ಶುಚಿಗೊಳಿಸಿ, ಮಾಲಾರ್ಪಣೆ ಮಾಡುವ ಮೂಲಕ‌ ಪ್ರತಿಭಟನೆಗೆ ಚಾಲನೆ ನೀಡಿದರು.

ಪ್ರತಿಭಟನಾಕಾರರು ಅಂಬೇಡ್ಕರ್ ವೃತ್ತದಿಂದ ಲ್ಯಾಮಿಂಗ್ಟನ್ ರಸ್ತೆ, ರಾಯಣ್ಣ ವೃತ್ತ, ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತದ ಮೂಲಕ ಸಾಗಿ ಪುನಃ ರಾಯಣ್ಣ ವೃತ್ತಕ್ಕೆ ಬಂದು ಸಾಂಕೇತಿಕ ಸಭೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆಯುದ್ದಕ್ಕೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ADVERTISEMENT

ನಂತರ ಮಿನಿ ವಿಧಾನಸೌಧಕ್ಕೆ ಬಂದು ತಹಶೀಲ್ದಾರ್'ಗೆ ಮನವಿ ಸಲ್ಲಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ, ನವೀನ್ ಹಕ್ಕಿಮ್, ಸಾದಿಕ್ ಹಕ್ಕಿಮ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.