ADVERTISEMENT

ಫೆ.8ಕ್ಕೆ ಉದ್ಯೋಗ ಮೇಳ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 14:04 IST
Last Updated 7 ಫೆಬ್ರುವರಿ 2022, 14:04 IST

ಹುಬ್ಬಳ್ಳಿ: ಕೌಶಲಾಭಿವೃದ್ಧಿ ಇಲಾಖೆ ವತಿಯಿಂದ ಫೆ.8 ರಂದು ಬೆಳಿಗ್ಗೆ 9ಕ್ಕೆ ರಾಯಾಪುರದಲ್ಲಿನ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಜವಳಿ ಆಧಾರಿತ ಉದ್ದಿಮೆಗಳಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಉದ್ಯೋಗವಕಾಶಗಳು ಲಭ್ಯವಿವೆ.ಆಸಕ್ತ ಅಭ್ಯರ್ಥಿಗಳು ಅಂಕಪಟ್ಟಿ, ತರಬೇತಿ ಪ್ರಮಾಣ ಪತ್ರ ಹಾಗೂ ಇತರ ಮೂಲದಾಖಲೆಗಳ ಎರಡು ಝೆರಾಕ್ಸ್‌ ಪ್ರತಿಗಳೊಂದಿಗೆ ಭಾಗವಹಿಸಬಹುದು ಎಂದು ಕೌಶಲಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT