ಧಾರವಾಡ: ಪೊಲೀಸ್ ಕಾನ್‌ಸ್ಟೆಬಲ್, ಸಹಿತ ವಿವಿಧ ಹುದ್ದೆಗಳ ನೇಮಕಾತಿಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆಯವರು (ಎಕೆಎಸ್ಎಸ್ಎ) ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜುಬಿಲಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಹುದ್ದೆಗಳ ಭರ್ತಿಗೆ ಆಗ್ರಹಿಸಿ ಘೋಷಣೆ ಕೂಗಿದರು.
ಕೆಲವು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಹಲವು ಉದ್ಯೋಗಾರ್ಥಿಗಳು ವಯೋಮಿತಿ ಮೀರಿ ಉದ್ಯೋಗದಿಂದ ವಂಚಿತರಾಗುವಂತಾಗಿದೆ ಎಂದು ಅಳಲು ತೋಡಿಕೊಂಡರು.
ಪ್ರತಿಭಟನಾಕಾರರು ಜುಬಿಲಿ ವೃತ್ತದಲ್ಲಿ ಧರಣಿ ಕುಳಿತಿದ್ದರಿಂದ ಕೆಲಕಾಲ ಸಂಚಾರಕ್ಕೆ ತೊಡಕಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.