ADVERTISEMENT

ಜೋಶಿ ಫಿನಾಯಿಲ್‌ ಫ್ಯಾಕ್ಟರಿಗೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2020, 4:14 IST
Last Updated 27 ಅಕ್ಟೋಬರ್ 2020, 4:14 IST
ಫ್ಯಾಕ್ಟರಿಯಲ್ಲಿ ಹೊತ್ತಿಕೊಂಡ ಬೆಂಕಿಯ ಚಿತ್ರಣ
ಫ್ಯಾಕ್ಟರಿಯಲ್ಲಿ ಹೊತ್ತಿಕೊಂಡ ಬೆಂಕಿಯ ಚಿತ್ರಣ   

ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ತಾಲ್ಲೂಕಿನ ಬಳಗಲಿ ಬಳಿ ಇರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಸಂಬಂಧಿಸಿದ ಕಸಬರಿಗೆ ಮತ್ತು ಫಿನಾಯಿಲ್‌ ಫ್ಯಾಕ್ಟರಿಗೆ ಸೋಮವಾರ ಬೆಂಕಿ ತಗುಲಿ ಹಾನಿಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿಯವರೆಗೂ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಹಾನಿಯ ಪ್ರಮಾಣ ಎಷ್ಟೆಂಬುದು ನಿಖರವಾಗಿ ಗೊತ್ತಾಗಿಲ್ಲ.

ಫ್ಯಾಕ್ಟರಿಗೆ ಬೆಂಕಿ ಬಿದ್ದಿರುವ ಘಟನೆ ನಡೆದಿದೆ. ನಮ್ಮ ಸಿಬ್ಬಂದಿಯೂ ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಆದರೆ ಇನ್ನು ಪ್ರಕರಣ ದಾಖಲಾಗಿಲ್ಲ ಎಂದು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.