ADVERTISEMENT

ರಸ್ತೆ ಕಾಮಗಾರಿ: ಗಡ್ಕರಿ ಜೊತೆ ಜೋಶಿ ಚರ್ಚೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 5:55 IST
Last Updated 2 ಡಿಸೆಂಬರ್ 2022, 5:55 IST
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು. ಸಚಿವರಾದ ಗೋವಿಂದ ಕಾರಜೋಳ ಮತ್ತು ಶಂಕರ ಪಾಟೀಲ ಮುನೇನಕೊಪ್ಪ ಇದ್ದಾರೆ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು. ಸಚಿವರಾದ ಗೋವಿಂದ ಕಾರಜೋಳ ಮತ್ತು ಶಂಕರ ಪಾಟೀಲ ಮುನೇನಕೊಪ್ಪ ಇದ್ದಾರೆ   

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಬೈಪಾಸ್ ವಿಸ್ತರಣೆ ಸೇರಿದಂತೆ ವಿವಿಧ ರಸ್ತೆ ಕಾಮಗಾರಿಗಳ ಕುರಿತು ಸಚಿವ ಪ್ರಲ್ಹಾದ ಜೋಶಿ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ದೆಹಲಿಯಲ್ಲಿ ಬುಧವಾರ ಚರ್ಚಿಸಿದರು.

ಬೈಪಾಸ್ ವಿಸ್ತರಣೆಯ ಟೆಂಡರ್‌ಗೆ ಈಗಾಗಲೇ ಅನುಮೋದನೆ ದೊರಕಿದ್ದು, ಕಾಮಗಾರಿಯನ್ನು ಶೀಘ್ರವೇ ಪ್ರಾರಂಭಿಸಬೇಕು ಎಂದು ಗಡ್ಕರಿ ಅವರು ಸೂಚನೆ ನೀಡಿದರು.ಅವಳಿ ನಗರದ ಸುತ್ತಲಿರುವ ಚತುಷ್ಪಥ ಮತ್ತು ಷಟ್ಪಥಗಳಿಗೆ ಅಂಡರ್‌ಪಾಸ್‌ಗಳನ್ನು ನಿರ್ಮಾಣ ಮಾಡಿ ಕೊಡುವುದಾಗಿ ಭರವಸೆ ನೀಡಿದರು ಎಂದು ಜೋಶಿ ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಭೇಟಿ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.