ADVERTISEMENT

ಜೆಎಸ್‌ಎಸ್‌ ಕಾರ್ಯದರ್ಶಿ ಡಾ. ನ. ವಜ್ರಕುಮಾರ ನಿಧನ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 3:06 IST
Last Updated 2 ಸೆಪ್ಟೆಂಬರ್ 2022, 3:06 IST
ಡಾ. ನ. ವಜ್ರಕುಮಾರ
ಡಾ. ನ. ವಜ್ರಕುಮಾರ   

ಧಾರವಾಡ:ಧಾರವಾಡದ ಜನತಾ ಶಿಕ್ಷಣ ಸಮಿತಿ (ಜೆ ಎಸ್ ಎಸ್) ಕಾರ್ಯದರ್ಶಿ, ಎಸ್. ಡಿ. ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಾ. ನ. ವಜ್ರಕುಮಾರ ಅವರು ಶುಕ್ರವಾರ ಬೆಳಿಗ್ಗೆ ನಿಧನರಾದರು.

ಸುಧೀರ್ಘ ಅವಧಿಗೆ ಜೆಎಸೆಸ್ ಕಾಲೇಜಿನ ಪ್ರಚಾರ್ಯರಾಗಿದ್ದ ಅವರು ನಂತರ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಒಬ್ಬರಾಗಿ ಸಂಸ್ಥೆ ಯನ್ನು ಯಶಸ್ವಿ ಯಾಗಿ ಮುನ್ನಡೆಸಿದರು.

ಮೃತರ ಅಂತ್ಯಕ್ರಿಯೆ ಅವರ ಹುಟ್ಟೂರಾದ ದಕ್ಷಿಣ ಕನ್ನಡ ಜಿಲ್ಲೆಯ ಯರ್ಮಾಳ ದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಡಾ. ನ.ವಜ್ರಕುಮಾರಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಧಾರವಾಡದ ಜೆಎಸೆಸ್ ಆವರಣದಲ್ಲಿ ಬೆಳಿಗ್ಗೆ 9.30ರವರೆಗೆ ಅವಕಾಶ ಕಲ್ಪಿಸಲಾಗಿದೆ.

ವಜ್ರಕುಮಾರ್‌ ನಿಧನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.