ADVERTISEMENT

ಧಾರವಾಡ | 2006ನೇ ದಿನಕ್ಕೆ ಕಾಲಿಟ್ಟ ಸತ್ಯಾಗ್ರಹ; ಕಳಸಾ–ಬಂಡೂರಿ ಕಾಮಗಾರಿಗೆ ಆಗ್ರಹ

ಪ್ರಧಾನಿ ಮೇಲೆ ಒತ್ತಡ ಹೇರುವಂತೆ ರೈತರ ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2022, 5:51 IST
Last Updated 12 ಮಾರ್ಚ್ 2022, 5:51 IST
ಪಕ್ಷಾತೀತ ಹೋರಾಟ ಸಮಿತಿ ಸದಸ್ಯರು ತಹಶೀಲ್ದಾರ್‌ ನವೀನ ಹುಲ್ಲೂರ ಅವರಿಗೆ ಮನವಿ ಸಲ್ಲಿಸಿದರು
ಪಕ್ಷಾತೀತ ಹೋರಾಟ ಸಮಿತಿ ಸದಸ್ಯರು ತಹಶೀಲ್ದಾರ್‌ ನವೀನ ಹುಲ್ಲೂರ ಅವರಿಗೆ ಮನವಿ ಸಲ್ಲಿಸಿದರು   

ನವಲಗುಂದ: ಮಹದಾಯಿ– ಕಳಸಾ ಬಂಡೂರಿ ನದಿ ಜೋಡಣೆ ಪ್ರಾರಂಭಿಸುವಂತೆ ಪಕ್ಷಾತೀತ ಹೋರಾಟ ಸಮಿತಿ ತಹಶೀಲ್ದಾರ್ ನವೀನ ಹುಲ್ಲೂರ ಅವರ ಮುಖಾಂತರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಲ್ಲಿಸಿದ್ದರು.

ಸಮಿತಿ ಅಧ್ಯಕ್ಷ ಸಿದ್ದಪ್ಪ ಮುಪೈನವರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ಪ್ರಣಾಳಿಕೆಯಲ್ಲಿ ಅಂತರಾಜ್ಯ ನದಿ ಜೋಡಣೆ ಮಾಡುತ್ತೇವೆಂದು ರೈತ ಸಮುದಾಯಕ್ಕೆ ಭರವಸೆ ನೀಡಿ ಹತ್ತು ವರ್ಷ ಕಳೆದರೂ ಕಾಮಗಾರಿ ಆರಂಭವಾಗಿಲ್ಲ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಾದಾಯಿ ಯೋಜನೆಗೆ ₹ 1 ಸಾವಿರ ಕೋಟಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದು, ರೈತ ಕುಲಕ್ಕೆ ಸಂತಸ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಿ ಸಮಸ್ಯೆ ಪರಿಹರಿಸಬೇಕೆಂದು ಒತ್ತಾಯಿಸಿದರು.

ಕಾಮಗಾರಿ ಆರಂಭಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು, ಎಲ್ಲ ಕಚೇರಿಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಸುಭಾಸ್ ಚಂದ್ರಗೌಡ ಪಾಟೀಲ್, ಮಲ್ಲೇಶ್ ಉಪ್ಪಾರ, ಬಸನಗೌಡ ಫಕ್ಕೀರಗೌಡ, ಶಿವಪ್ಪ ಸಂಗಳದ, ಗೋವಿಂದರಡ್ಡಿ ಮೊರಬದ ಉಪಸ್ಥಿತರಿದ್ದರು.

ADVERTISEMENT

ಪಟ್ಟಣ ರೈತ ಭವನದಲ್ಲಿ ಪಕ್ಷಾತೀತ ಹೋರಾಟ ಸಮಿತಿ ಮಹದಾಯಿ ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ನಡೆಸುತ್ತಿರುವ ನಿರಂತರ ಧರಣಿ ಸತ್ಯಾಗ್ರಹ 2006ನೇ ದಿನಕ್ಕೆ ಕಾಲಿಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.