
ನವಲಗುಂದ: ಕಲಿಕಾ ಹಬ್ಬವು ಮಕ್ಕಳ ಕಲಿಕೆಗೆ ಉತ್ತೇಜನ ನೀಡುವುದರ ಜೊತೆಗೆ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಅಣ್ಣಿಗೇರಿ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ದೇವರಾಜ ದಾಡಿಭಾವಿ ಹೇಳಿದರು.
ಅವರು ಬುಧವಾರ ತಾಲ್ಲೂಕಿನ ಮೊರಬ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮಲ್ಲಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಶಿಕ್ಷಣ, ಕ್ರೀಡೆ ಸೇರಿದಂತೆ ಎಲ್ಲ ರಂಗಗಳಲ್ಲಿಯೂ ಮುಂಚೂಣಿಗೆ ಬರುವಂತಾಗಲಿ ಎಂದು ತಿಳಿಸಿದರು.
ಸಾನ್ನಿಧ್ಯ ವಹಿಸಿದ್ದ ಗ್ರಾಮದ ಜಡಿಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮಕ್ಕಳಲ್ಲಿ ಅಕ್ಷರ ಜ್ಞಾನ ಮೂಡಿಸಲು ಶಿಕ್ಷಕರೊಂದಿಗೆ ಪಾಲಕರು ಹಾಗೂ ಪೋಷಕರು ಸಹ ಕೈಜೋಡಿಸಬೇಕು ಎಂದರು.
ಮಹಾಂತೇಶ ಹಂಚಿನಾಳ, ರವಿ ಕಗದಾಳ, ಈಶ್ವರ ಜಾಲಿಹಾಳ, ಬಸಣ್ಣ ಕೋಟವಾಗಿ, ಎನ್.ಎಂ. ಮುಲ್ಲಾ, ವಿಜಯಲಕ್ಷ್ಮಿ ಕಡಕೋಳ, ಶಾಂತದೇವಿ ಮಾಸ್ತಿ, ರೇಖಾ ಪಡಸುನಗಿ, ರತ್ನಾ ಕಮ್ಮರ, ಸಲೀಂ ಅಗಸರ, ಶ್ರೀಶೈಲ್ ಅಕ್ಕಿ, ಮಂಜುನಾಥ ತಳವಾರ, ಲಲಿತ ಗಾಣಿಗೇರ ಸೇರಿದಂತೆ ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.