ADVERTISEMENT

ಕನ್ನಡ ಬದುಕಿನ ಭಾಷೆ: ಇಂದುಮತಿ ಸಾಲಿಮಠ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 15:24 IST
Last Updated 17 ಜೂನ್ 2025, 15:24 IST
ಧಾರವಾಡದ ಮೃತ್ಯುಂಜಯ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಮಾತನಾಡಿದರು
ಧಾರವಾಡದ ಮೃತ್ಯುಂಜಯ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಮಾತನಾಡಿದರು   

ಧಾರವಾಡ: ‘ಕನ್ನಡ ನಮ್ಮ ಬದುಕಿನ ಭಾಷೆಯಾಗಿದ್ದು, ಎಲ್ಲರೂ ಪ್ರೀತಿಸಿ ಗೌರವಿಸಬೇಕು’ ಎಂದು ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಹೇಳಿದರು.

ಕೆಎಲ್‍ಇ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ, ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಅದರೊಂದಿಗೆ ಇತರ ಭಾಷೆ ಕಲಿಯಬೇಕು’ ಎಂದರು.

ADVERTISEMENT

ಕೆಎಲ್‍ಇ ಆಡಳಿತ ಮಂಡಳಿ ಸದಸ್ಯ ಶಂಕರಣ್ಣ ಮುನವಳ್ಳಿ ಮಾತನಾಡಿದರು. ಎಸ್.ಬಿ.ಶಿವಳ್ಳಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯೆ ನೀಲಕ್ಕ ಸಿ. ಪಾಟೀಲ, ಪ್ರೊ. ಎಸ್.ಎಸ್.ಸಂಗೊಳ್ಳಿ, ವೀಣಾ ಹೂಗಾರ, ಅಶೋಕ ಚಿಕ್ಕೋಡಿ, ಸಿ.ಎಸ್.ಪಾಟೀಲ, ಎಫ್.ವಿ.ಕಲ್ಲೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.