ADVERTISEMENT

ರಾಜ್ಯೋತ್ಸವ ಪ್ರಶಸ್ತಿ ಶಿಕ್ಷಣ ಕ್ಷೇತ್ರಕ್ಕೆ ಸಂದ ಗೌರವ: ಅಶೋಕ ಶೆಟ್ಟರ್‌ ಸಂತಸ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 9:29 IST
Last Updated 28 ಅಕ್ಟೋಬರ್ 2020, 9:29 IST
ಅಶೋಕ ಶೆಟ್ಟರ್‌
ಅಶೋಕ ಶೆಟ್ಟರ್‌   

ಹುಬ್ಬಳ್ಳಿ: ರಾಜ್ಯೋತ್ಸವ ಪ್ರಶಸ್ತಿ ವೈಯಕ್ತಿಕವಾಗಿ ನನಗೆ ಸಿಕ್ಕ ಗೌರವ ಎನ್ನುವುದಕ್ಕಿಂತ ಹೆಚ್ಚಾಗಿ ಉತ್ತರ ಕರ್ನಾಟಕದ ಶಿಕ್ಷಣ ಕ್ಷೇತ್ರಕ್ಕೆ ಸಂದ ಗೌರವವೆಂದು ಭಾವಿಸಿದ್ದೇನೆ ಎಂದು ಅಶೋಕ ಶೆಟ್ಟರ್‌ ಪ್ರತಿಕ್ರಿಯಿಸಿದರು.

ಶೆಟ್ಟರ್, ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಅವರನ್ನು ರಾಜ್ಯೋತ್ಸವ ಪ್ರಶಸ್ತಿಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಅವರು ಕೆಎಲ್ಇ ಸಂಸ್ಥೆಯಲ್ಲಿ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯಾಗಿ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. ಮೂಲತಃ ಬಾಗಲಕೋಟೆಯವರು.

‘ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕರ್ನಾಟಕದಲ್ಲಿ ಆಗುತ್ತಿರುವ ಬದಲಾವಣೆಯನ್ನು ಗುರುತಿಸಿ ನೀಡಿರುವ ಗೌರವವಿದು. ಪ್ರಶಸ್ತಿ ಬಂದ ವಿಷಯ ಕೇಳಿ ಅಚ್ಚರಿಯಾಯಿತು. ಅನಿರೀಕ್ಷಿತವಾಗಿ ಬಂದ ಗೌರವ ಇನ್ನಷ್ಟು ಸಾಧನೆಗೆ ಪ್ರೇರಣೆಯಾಗಿದೆ. ಶೈಕ್ಷಣಿಕವಾಗಿ ಈ ಭಾಗ ಬೆಳೆಯಲು ಅನುಕೂಲವಾಗಲಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.