ADVERTISEMENT

ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2019, 19:13 IST
Last Updated 5 ನವೆಂಬರ್ 2019, 19:13 IST
ಮಿಂಟೋ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಒತ್ತಾಯಿಸಿ ಕರವೇ ಪದಾಧಿಕಾರಿಗಳು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು
ಮಿಂಟೋ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಒತ್ತಾಯಿಸಿ ಕರವೇ ಪದಾಧಿಕಾರಿಗಳು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು   

ಹುಬ್ಬಳ್ಳಿ: ‘ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಂದ ರೋಗಿಗಳನ್ನು ಶಾಶ್ವತವಾಗಿ ಕುರುಡರನ್ನಾಗಿಸಿದ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ವೈದ್ಯರ ನಿರ್ಲಕ್ಷದಿಂದ 22 ಬಡ ರೋಗಿಗಳು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿ, ವೈದ್ಯರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು ಖಾಸಗಿ ಆಸ್ಪತ್ರೆಗಳನ್ನು ನಡೆಸುತ್ತಿದ್ದಾರೆ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳನ್ನು ತಮ್ಮ ಖಾಸಗಿ ಆಸ್ಪತ್ರೆಗೆ ಬರುವಂತೆ ಸೂಚಿಸುತ್ತಾರೆ. ಬೇಜವಾಬ್ದಾರಿಯಿಂದ ಚಿಕಿತ್ಸೆ ನೀಡಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಅಮೃತ ಇಜಾರಿ, ರೇಣುಕಾ, ಸಚಿನ್‌ ಗಾಣಿಗೇರ, ಬಸವರಾಜ ದೇವರಮನಿ, ವಿನೋದ ಕ್ಯಾರಕಟ್ಟಿ, ಸುರೇಶ ಗೋಕಾಕ, ರಂಗನಾಥ ಕಣಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.