
ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
–ಪಿಟಿಐ ಚಿತ್ರ
ಹುಬ್ಬಳ್ಳಿ: ‘ವಿಜಯಪುರ, ಬೆಳಗಾವಿ, ಹುಬ್ಬಳ್ಳಿ ಮತ್ತು ಶಿವಮೊಗ್ಗ ವಿಮಾನ ನಿಲ್ದಾಣಗಳಿಗೆ ಕನ್ನಡನಾಡಿನ ಮಹನೀಯರ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಹಕ್ಕೊತ್ತಾಯ ಸಲ್ಲಿಸೋಣ’ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
ನಾಲ್ಕು ವಿಮಾನ ನಿಲ್ದಾಣಗಳ ಕನ್ನಡಿಗರ ನಾಮಕರಣ ಸಮಿತಿ ಸೇರಿ ವಿವಿಧ ಸಂಘಟನೆಗಳು ಶನಿವಾರ ಏರ್ಪಡಿಸಿದ್ದ ಸಮಾವೇಶದಲ್ಲಿ ಮಾತನಾಡಿದರು. ‘ ರಾಜ್ಯ ಸರ್ಕಾರದ ಶಿಫಾರಸಿಗೆ ಜನವರಿ 26ರೊಳಗೆ ಕೇಂದ್ರ ಸ್ಪಂದಿಸದಿದ್ದರೆ, ದೆಹಲಿ ಚಲೋ ಕೈಗೊಳ್ಳೋಣ’ ಎಂದರು.
‘ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ, ಬೆಳಗಾವಿ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ, ಹುಬ್ಬಳ್ಳಿ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಮತ್ತು ಶಿವಮೊಗ್ಗ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.