ADVERTISEMENT

ಹುಬ್ಬಳ್ಳಿ: ಜಗದೀಶ ಶೆಟ್ಟರ್ ಕಾಲಿಗೆರಗಿ ಸ್ವಾಗತಿಸಿದ ಕಾಂಗ್ರೆಸ್ ಮುಖಂಡ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2023, 9:51 IST
Last Updated 16 ಏಪ್ರಿಲ್ 2023, 9:51 IST
   

ಹುಬ್ಬಳ್ಳಿ: ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಶಿರಸಿಯಿಂದ ಹುಬ್ಬಳ್ಳಿಗೆ ವಾಪಸ್ಸಾದ ಶಾಸಕ‌ ಜಗದೀಶ ಶೆಟ್ಟರ್ ಅವರಿಗೆ ರುದ್ರಾಕ್ಷಿ ಹಾರ ಹಾಕಿ ಕಾಂಗ್ರೆಸ್ ಗೆ ಸ್ವಾಗತಿಸಿದ ಪಕ್ಷದ ಮುಖಂಡ ಹಾಗೂ ಅಖಿಲ ಕರ್ನಾಟಕ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಅಧ್ಯಕ್ಷ ಗಿರೀಶ ಗದಿಗೆಪ್ಪಗೌಡರ ಅವರು, ನಂತರ ಕಾಲಿಗೆರಗಿ ನಮಸ್ಕರಿಸಿದರು.

ನಂತರ‌ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶೆಟ್ಟರ್ ಅವರ ಕಾಂಗ್ರೆಸ್ ಸೇರ್ಪಡೆಯಿಂದ ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಹೊಸ ಶಕ್ತಿ ಬಂದಿದೆ. ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ. ಈ ಭಾಗದ ಹಲವು ಕ್ಷೇತ್ರಗಳಲ್ಲಿ ಪಕ್ಷಕ್ಕೆ ವರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇವನ್ನೂ ಓದಿ...

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.