ADVERTISEMENT

ನವಲಗುಂದದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 9:27 IST
Last Updated 4 ಆಗಸ್ಟ್ 2021, 9:27 IST
ನವಲಗುಂದ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಅವರ ಬೆಂಬಲಿಗರಿಂದ ಸಂಭ್ರಮ
ನವಲಗುಂದ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಅವರ ಬೆಂಬಲಿಗರಿಂದ ಸಂಭ್ರಮ   

ನವಲಗುಂದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ಖಚಿತವಾಗುತ್ತಿದ್ದಂತೆ, ಅವರ ಬೆಂಬಲಿಗರು ಪಟಾಕಿ‌ ಸಿಡಿಸಿ ಸಂಭ್ರಮಿಸಿದರು.

ಬಿಜೆಪಿಯ ಯುವ ಮೋರ್ಚಾ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಶುಭಾಶಯ ವಿನಿಮಯ ಮಾಡಿಕೊಂಡರು. ಪ್ರಮಾಣ ವಚನ ಸ್ವೀಕಾರದ‌ ಸಮಯಕ್ಕೆ ದೊಡ್ಡ ಮಟ್ಟದಲ್ಲಿ ಸಂಭ್ರಮ ಆಚರಿಸಲು ಕಾರ್ಯಕರ್ತರು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.


ಮುನೇನಕೊಪ್ಪ‌ ಅವರ ಹಿತೈಷಿಗಳು ಬೆಳಗ್ಗೆಯೇ ಬೆಂಗಳೂರಿಗೆ ಹೋಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.