ADVERTISEMENT

ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ದೀಪಾವಳಿ ಆಚರಣೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2021, 15:51 IST
Last Updated 6 ನವೆಂಬರ್ 2021, 15:51 IST
ಹುಬ್ಬಳ್ಳಿಯಲ್ಲಿ ಶುಕ್ರವಾರ ದೀಪಾವಳಿ ಅಂಗವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿಯಲ್ಲಿ ನಡೆದ ಲಕ್ಷ್ಮಿ ಪೂಜೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು
ಹುಬ್ಬಳ್ಳಿಯಲ್ಲಿ ಶುಕ್ರವಾರ ದೀಪಾವಳಿ ಅಂಗವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿಯಲ್ಲಿ ನಡೆದ ಲಕ್ಷ್ಮಿ ಪೂಜೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು   

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಲಿಪಾಡ್ಯಮಿ ದಿನವಾದ ಶುಕ್ರವಾರ ನಗರದಲ್ಲಿ ತಮ್ಮ ಸ್ನೇಹಿತರ ಹಾಗೂ ಆಪ್ತರ ಜೊತೆ ಕಳೆದು, ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೀಪಾವಳಿ ಆಚರಿಸಿದರು.

ಎರಡು ದಿನಗಳಿಂದ ಇಲ್ಲಿಯೇ ವಾಸ್ತವ್ಯ ಹೂಡಿದ್ದ ಬೊಮ್ಮಾಯಿ ಅವರು ಮೊದಲು ಕಾಟನ್ ಮಾರ್ಕೆಟ್‌ನಲ್ಲಿರುವ ಪಾಲಿಕೆ ಸದಸ್ಯ ಬಿಜೆಪಿಯ ರಾಜಣ್ಣ ಕೊರವಿ ಅವರ ವಾಣಿಜ್ಯ ಮಳಿಗೆಯಲ್ಲಿ ನಡೆದ ಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಅಲ್ಲಿ ಮಾತನಾಡಿದ ಅವರು ‘ಈ ಬಾರಿಯ ದೀಪಾವಳಿ ಮನುಷ್ಯ ಸಂಕುಲಕ್ಕೆ ಸುಖ ಹಾಗೂ ನೆಮ್ಮದಿ ತರಲಿ. ಯಾವುದೇ ರೋಗ ಹಾಗೂ ವಿಪತ್ತು ಕಾಡದಿರಲಿ. ಎಲ್ಲರೂ ಖುಷಿಯಿಂದ ಬದುಕಲಿ’ ಎಂದು ಹಾರೈಸಿದರು.

ADVERTISEMENT

ಬಸವರಾಜ ಬೊಮ್ಮಾಯಿ ಅವರು ತಮ್ಮ ತಂದೆಯ ಕಾಲದಿಂದಲೂ ಪ್ರತಿ ದೀಪಾವಳಿಗೆ ನಮ್ಮ ಅಂಗಡಿ ಪೂಜಾ ಕಾರ್ಯದಲ್ಲಿ ಪಾಲ್ಗೊಳ್ಳುವುದು ನಡೆದುಕೊಂಡು ಬಂದಿದೆ ಎಂದು ರಾಜಣ್ಣ ಕೊರವಿ ತಿಳಿಸಿದರು.

ಶಾಸಕರಾದ ಜಗದೀಶ ಶೆಟ್ಟರ್, ಪ್ರಸಾದ ಅಬ್ಬಯ್ಯ, ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಕ್ಕರೆ ಖಾತೆ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಮೋಹನ ಲಿಂಬಿಕಾಯಿ, ಚನ್ನು ಪಾಟೀಲ, ಎಂಬಿಎಸ್‌ ನಿರ್ದೇಶಕ ಡಾ. ವಿಶ್ವನಾಥ ಕೊರವಿ ಪಾಲ್ಗೊಂಡಿದ್ದರು.

ಬಳಿಕ ಪ್ರಲ್ಹಾದ ಜೋಶಿ ಅವರ ಕಚೇರಿಯಲ್ಲಿ ನಡೆದ ಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾದರು. ತಮ್ಮ ಆಪ್ತರು, ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಶಾಸಕ ಅಮೃತ ದೇಸಾಯಿ, ಹುಬ್ಬಳ್ಳಿ–ಧಾರವಾಡ ಪೊಲೀಸ್‌ ಕಮಿಷನರ್‌ ಲಾಬೂರಾಬ್‌ ಇದ್ದರು. ಬಳಿಕ ಬೆಂಗಳೂರಿಗೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.