ADVERTISEMENT

ಧಾರವಾಡ: ಶಾಸಕ ವಿನಯ ಕುಲಕರ್ಣಿ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2023, 15:14 IST
Last Updated 23 ಸೆಪ್ಟೆಂಬರ್ 2023, 15:14 IST
ಶಾಸಕ ವಿನಯ ಕುಲಕರ್ಣಿ
ಶಾಸಕ ವಿನಯ ಕುಲಕರ್ಣಿ   

ಧಾರವಾಡ: ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಅವರು ಧಾರವಾಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧಿಸಿ ಕೋರ್ಟ್ ವಿಧಿಸಿರುವ ಷರತ್ತನ್ನು ಸಡಿಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಶನಿವಾರ ತಿರಸ್ಕರಿಸಿದೆ.

ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣೆ ನಡೆಸಿದರು. ಅರ್ಜಿದಾರರ ಪರ ವಕೀಲ ಸಿ.ಎಚ್.ಹನುಮಂತರಾಯ ಹಾಗು ಸಿಬಿಐ ಪರ ಪಿ. ಪ್ರಸನ್ನಕುಮಾರ್ ಅವರು ವಾದ ಮಂಡಿಸಿದರು.

ಎರಡೂ ಕಡೆಯ ವಾದವನ್ನು ನ್ಯಾಯಪೀಠವು ಆಲಿಸಿದೆ. ಇದೇ ರೀತಿ ಮನವಿ ಹೊಂದಿದ ಅರ್ಜಿ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಾಗಿ ಈ ಷರತ್ತಿನ ಮೇಲೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸದಿರುವುದರಿಂದ ಈ ನ್ಯಾಯಾಲಯಕ್ಕೆ ಷರತ್ತು ಸಡಿಲಿಸುವ ಅಧಿಕಾರ ಇದೆಯೋ ಇಲ್ಲವೋ ಎಂಬ ಸ್ಪಷ್ಟತೆ ಇಲ್ಲ. ಹೀಗಾಗಿ, ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡಬೇಕು ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.