ADVERTISEMENT

4,600 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ: ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 1:26 IST
Last Updated 12 ಅಕ್ಟೋಬರ್ 2025, 1:26 IST
ಜಿ.ಪರಮೇಶ್ವರ್
ಜಿ.ಪರಮೇಶ್ವರ್   

ಹುಬ್ಬಳ್ಳಿ: ‘ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15 ಸಾವಿರ‌ ಹುದ್ದೆಗಳಲ್ಲಿ 4,600 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ’ ಎಂದು ಗೃಹ ಸಚಿವ ಜಿ‌.ಪರಮೇಶ್ವರ್ ಹೇಳಿದರು‌.

‘545 ಪಿಎಸ್ಐಗಳ ನೇಮಕಾತಿ ಮಾಡಿ, ಅವರಿಗೆ ತರಬೇತಿ ಪ್ರಗತಿಯಲ್ಲಿದೆ. ಹೊಸದಾಗಿ 402 ಪಿಎಸ್ಐ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಅದರ ಜತೆಗೆ ಇನ್ನೂ 600 ಪಿಎಸ್ಐ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಒಳಮೀಸಲಾತಿ ಜಾರಿ ಸಂಬಂಧ ನೇಮಕಾತಿ ನಡೆದಿರಲಿಲ್ಲ. ಈಗ ಎಲ್ಲ ಇಲಾಖೆಗಳಲ್ಲಿ ನೇಮಕಾತಿ ಆರಂಭಿಸಲಾಗುವುದು.  ಅಭ್ಯರ್ಥಿಗಳಿಗೆ ಅನ್ಯಾಯವಾಗದಿರಲಿಯೆಂದು ವಯೋಮಿತಿ ಸಡಿಲಿಸಲಾಗಿದೆ. ಮಾರ್ಗಸೂಚಿ ಅನ್ವಯ, ‍‍ಪಾರದರ್ಶಕವಾಗಿ ನೇಮಕಾತಿ ನಡೆಯಲಿದೆ. ಇನ್‌ಸ್ಪೆಕ್ಟರ್‌ಗಳನ್ನು ಎರಡು ವರ್ಷಗಳಿಗೊಮ್ಮೆ ವರ್ಗಾವಣೆ ಮಾಡುವ ನಿಯಮ ಜಾರಿಗೆ ತರಲಾಗಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.