ADVERTISEMENT

ಸಿ.ಎಂ. ಬದಲಾವಣೆ; ಕಾದು ನೋಡಬೇಕಿದೆ: ಜಗದೀಶ್ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 8:03 IST
Last Updated 24 ಜುಲೈ 2021, 8:03 IST
   

ಹುಬ್ಬಳ್ಳಿ: ‘ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ಸ್ಪಷ್ಟತೆಯಿಲ್ಲ. ಕಾದು ನೋಡಬೇಕಿದೆ’ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಈಗಾಗಲೇ ಬಿ.ಎಸ್. ಯಡಿಯೂರಪ್ಪ ಅವರು ಹೇಳಿಕೆ‌ ನೀಡಿದ್ದಾರೆ. ನನಗೆ ಆ ಕುರಿತು ಯಾವುದೇ ಮಾಹಿತಿ ಇಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಲು ನಾನು ದೆಹಲಿಗೆ ಹೋಗಿಲ್ಲ. ಇಲಾಖೆ ವಿಚಾರಕ್ಕೆ ಸಂಬಂಧಿಸಿ ಗುಜರಾತ್-ದೆಹಲಿ ಭೇಟಿ ಮಾಡಿದ್ದೆ' ಎಂದು ಸ್ಪಷ್ಟಪಡಿಸಿದರು.

ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೊ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ, 'ಆಡಿಯೊ ಬಗ್ಗೆ ಈಗಾಗಲೇ ನಳಿನ್ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ಆಡಿಯೊ ಬಗ್ಗೆ ತನಿಖೆ‌ ಸಹ ನಡೆಯುತ್ತಿದ್ದು, ಆ ಕುರಿತು ಏನೂ ಮಾತನಾಡುವುದಿಲ್ಲ' ಎಂದು ಶೆಟ್ಟರ್ ಪ್ರತಿಕ್ರಿಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.