ADVERTISEMENT

ಹುಬ್ಬಳ್ಳಿ: ಹಲವೆಡೆ ಭೂಕುಸಿತ, ರೈಲ್ವೆ ಪ್ರಯಾಣಿಕರ ಪರದಾಟ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 6:39 IST
Last Updated 23 ಜುಲೈ 2021, 6:39 IST

ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ದೂದ್ ಸಾಗರ ಬಳಿ ರೈಲ್ವೆ ಮಾರ್ಗದಲ್ಲಿ ಎರಡು ಕಡೆ ಭೂಕುಸಿತವಾಗಿದ್ದು, ಪ್ರಯಾಣಿಕರನ್ನು ಬಸ್ ಗಳು ಮೂಲಕ ಅವರ ಸ್ಥಳಗಳಿಗೆ ಕಳುಹಿಸಿವ ವ್ಯವಸ್ಥೆ ಮಾಡಲಾಗಿದೆ.

ಮಂಗಳೂರು- ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದು ಹಳಿ ತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಅವರನ್ನು ಬೇರೆ ಬೋಗಿಗಳಿಗೆ ಸ್ಥಳಾಂತರಿಸಲಾಗಿದೆ.

ಹಜರತ್ ನಿಜಾಮುದ್ದೀನ್- ವಾಸ್ಕೊ ಡ ಗಾಮಾ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೂ ಅಡ್ಡಿಯಾಗಿದೆ.

ADVERTISEMENT

ಎರಡೂ ರೈಲುಗಳಲ್ಲಿದ್ದ ಸಾವಿರಕ್ಕೂ ಹೆಚ್ಚು ಪ್ರಯಾಣಿಕರನ್ನು ಬಸ್ ಗಳ ಮೂಲಕ ಬೆಳಗಾವಿ, ಹುಬ್ಬಳ್ಳಿ ರೈಲ್ವೆ‌ ನಿಲ್ದಾಣಕ್ಕೆ ಕರೆದುಕೊಂಡು ಬರಲಾಗಿದೆ. ರೈಲ್ವೆ ಮಾರ್ಗಗಳ ದುರಸ್ತಿ ಕಾರ್ಯವೂ ಆರಂಭಗೊಂಡಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.