ನವಲಗುಂದ: ಪಟ್ಟಣದಲ್ಲಿ ಜುಲೈ 21 ರಂದು ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ ಅವರು, ರೈತರ ಅನುಕಂಪ ಗಿಟ್ಟಿಸುವ ಉದ್ದೇಶದಿಂದ ರಾಜಕೀಯ ಹೋರಾಟ ಮಾಡಿದರೆ, ಅದನ್ನು ರೈತ ಸಂಘಟನೆಗಳು ಖಂಡಿಸಿ, ಪ್ರತಿಭಟಿಸುತ್ತವೆ. ಹಾಗಾಗಿ ರೈತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಧಾರವಾಡ ಡಿವೈಎಸ್‌ಪಿ ಎಸ್.ಎಂ. ನಾಗರಾಜ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರವಿರಾಜ ಕಂಬಳಿ ನೇತೃತ್ವದಲ್ಲಿ ರೈತ ಮುಖಂಡರು ಮನವಿ ಸಲ್ಲಿಸಿದರು.
ಶಾಸಕ ಎನ್.ಎಚ್.ಕೋನರಡ್ಡಿ ಅವರು ಈಚೆಗೆ ನೀಡಿದ ಪತ್ರಿಕಾ ಹೇಳಿಕೆಯಲ್ಲಿ ಜುಲೈ 21ರಂದು ಮಹದಾಯಿ ವಿಚಾರದಲ್ಲಿ ಕೇಂದ್ರದ ನಡೆ ಖಂಡಿಸಿ ಸಾವಿರಾರು ರೈತರನ್ನು ಸೇರಿಸಿ ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ. ಅವರ ಹೇಳಿಕೆಯನ್ನು ನಾವು ಬೆಂಬಲಿಸುತ್ತೇವೆ. ಆದರೆ ಅಂದು ಸುಳ್ಳು ಭರವಸೆ ನೀಡಿದಾಗ ಯಾವುದೇ ಅಹಿತಕರ ಘಟನೆ ನಡೆದರೆ ರೈತರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಶಾಸಕರಿಗೆ ರೈತರ ಮೇಲೆ ನಿಜವಾದ ಕಾಳಜಿ ಇದ್ದರೆ, ಸರ್ಕಾರದ ಮೇಲೆ ಒತ್ತಡ ಹಾಕಿ ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ಒತ್ತಾಯಿಸಲಿ ಎಂದರು.
ರೈತ ಹೋರಾಟಗಾರರಾದ ಲೋಕನಾಥ ಹೆಬಸೂರ, ನಾರಾಯಣ ಆರೇರ, ಮೈಲಾರಪ್ಪ ವೈದ್ಯ, ಎ. ಆರ್. ತಿವಾರಿ, ಗುರುನಾಥ ಹೆಬಸೂರ ಇನ್ನು ಅನೇಕ ರೈತ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.