
ಪ್ರಜಾವಾಣಿ ವಾರ್ತೆ
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ
ಧಾರವಾಡ: ಜ.15ರಂದು ನಡೆಯಬೇಕಿದ್ದ ಸ್ನಾತಕ ಪದವಿ ಪರೀಕ್ಷೆಗಳನ್ನು(1, 3, 5 ಮತ್ತು 7ನೇ ಸೆಮಿಸ್ಟರ್) ಕರ್ನಾಟಕ ವಿಶ್ವವಿದ್ಯಾಲಯ ಮುಂದೂಡಿದೆ.
15ರಂದು ಮಕರ ಸಂಕ್ರಾಂತಿ ಇರುವುದರಿಂದ ಪರೀಕ್ಷೆ ಮುಂದೂಡಲಾಗಿದೆ. ವಿ.ವಿ ವ್ಯಾಪ್ತಿಯ ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಿಗೆ ಇದು ಅನ್ವಯವಾಗಲಿದೆ.
ತಿದ್ದುಪಡಿ ವೇಳಾಪಟ್ಟಿಯನ್ನು www.kud.ac.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ವೈ.ಮಟ್ಟಿಹಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.