ಧಾರವಾಡ: ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆ ನೀಡುವ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಗೆ ಲೇಖಕಿ ಕಾವ್ಯಾ ಕಡಮೆ ಆಯ್ಕೆಯಾಗಿದ್ದಾರೆ ಎಂದು ವೇದಿಕೆ ಅಧ್ಯಕ್ಷ ಪ್ರೊ.ಮಲ್ಲಿಕಾರ್ಜುನ ಹಿರೇಮಠ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರಸ್ಕಾರವು ₹ 20 ಸಾವಿರ ನಗದು, ಫಲಕ ಒಳಗೊಂಡಿದೆ. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಜುಲೈ 28ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಾಹಿತಿ ಸಿದ್ಧಲಿಂಗ ಪಟ್ಟಣಶೆಟ್ಟಿ ಪ್ರಶಸ್ತಿ ಪ್ರದಾನ ಮಾಡುವರು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.