ADVERTISEMENT

ಕಿರೇಸೂರ: ಮಾರುತಿ ದೇವಸ್ಥಾನ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 16 ಮೇ 2022, 15:39 IST
Last Updated 16 ಮೇ 2022, 15:39 IST
ಹುಬ್ಬಳ್ಳಿ ತಾಲ್ಲೂಕಿನ ಕಿರೆಸೂರ ಗ್ರಾಮದಲ್ಲಿ ಮಾರುತಿ ದೇವರ ದೇವಸ್ಥಾನದ ಉದ್ಘಾಟನೆ ನಡೆಯಿತು. ಕಾಂಗ್ರೆಸ್ ಮುಖಂಡ ಎನ್.ಎಚ್. ಕೋನರಡ್ಡಿ, ಅಕ್ಕಿ ಆಲೂರಿನ ಮುತ್ತಿನಕಂಟಿ ಮಠದ ಚಂದ್ರಶೇಖರ ಸ್ವಾಮೀಜಿ, ಹೊಸಳ್ಳಿಯ ಅಭಿನವ ಬೂದೀಶ್ವರ ಸ್ವಾಮೀಜಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ ಇದ್ದಾರೆ

ಹುಬ್ಬಳ್ಳಿ: ತಾಲ್ಲೂಕಿನ ಕಿರೇಸೂರ ಗ್ರಾಮದಲ್ಲಿ₹15 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಮಾರುತಿ ದೇವರ ದೇವಸ್ಥಾನವನ್ನುಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರಿನ ಮುತ್ತಿನಕಂಟಿ ಮಠದ ಚಂದ್ರಶೇಖರ ಸ್ವಾಮೀಜಿ ಹಾಗೂ ಕಾಂಗ್ರೆಸ್ ಮುಖಂಡ ಎನ್.ಎಚ್. ಕೋನರಡ್ಡಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಕೋನರಡ್ಡಿ, ‘ನಾನು ಶಾಸಕನಾಗಿದ್ದಾಗ ಗ್ರಾಮಕ್ಕೆ ನೂತನ ಗ್ರಾಮ ಪಂಚಾಯಿತಿ ಮಂಜೂರು ಮಾಡಿ ಕಟ್ಟಡ ನಿರ್ಮಿಸಿದ್ದೇನೆ. ಕಾಂಕ್ರೀಟ್ ರಸ್ತೆ, ಮಲಪ್ರಭಾ ಬಲದಂಡೆ ಕಾಲುವೆ ಆಧುನೀಕರಣ, ಕಿರೇಸೂರ-ಬ್ಯಾಹಟ್ಟಿ ರಸ್ತೆಯ ಡಾಂಬರೀಕರಣ, ಚಕ್ಕಡಿ ರಸ್ತೆಗಳ ಅಭಿವೃದ್ಧಿಯಂತಹ ಕಾರ್ಯಗಳನ್ನು ಮಾಡಿದ್ದೇನೆ. ಸುವರ್ಣ ಗ್ರಾಮ ಯೋಜನೆಯಡಿ ದೇವಸ್ಥಾನ ನಿರ್ಮಾಣಕ್ಕೆ ₹15 ಲಕ್ಷ ಅನುದಾನ ಕೊಟ್ಟಿದ್ದೇನೆ’ ಎಂದರು.

ಹುಬ್ಬಳ್ಳಿಯ ನೀಲಕಂಠೇಶ್ವರ ಮಠದ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ, ಮನಸೂರ ಮಠದ ಡಾ. ಬಸವರಾಜ ದೇವರು, ಮಾಜಿ ಸಚಿವ ಕೆ.ಎನ್. ಗಡ್ಡಿ, ಕಾಂಗ್ರೆಸ್ ಮುಖಂಡರಾದ ಅನಿಲಕುಮಾರ ಪಾಟೀಲ, ವಿನೋದ ಅಸೂಟಿ, ಸದಾನಂದ ಡಂಗನವರ, ಡಾ. ಎಂ.ಎನ್. ಹುರಳಿ, ವೈ.ಎಚ್. ಬಣವಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಕೆ. ಪಾಟೀಲ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.