
ಪ್ರಜಾವಾಣಿ ವಾರ್ತೆ
ನವಲಗುಂದ: ‘ಸ್ವಾತಂತ್ರ‍್ಯ ಹೋರಾಟಗಾರ್ತಿ ಚನ್ನಮ್ಮನ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶುಕ್ರವಾರ ‘ಅಂಚೆ ಚೀಟಿ’ ಬಿಡುಗಡೆ ಮಾಡಲಿದೆ’ ಎಂದು ಬಿಜೆಪಿ ಪ್ರಮುಖ ಶಂಕರ ಪಾಟೀಲ ಮುನೇನಕೊಪ್ಪ ಅವರು ತಿಳಿಸಿದರು.
‘ಚನ್ನಮ್ಮ ಕನ್ನಡ ನಾಡಿನ ಹೆಮ್ಮೆ. ಪ್ರತಿಯೊಬ್ಬರು ಧನ್ಯತೆಯಿಂದ ಸ್ಮರಿಸುವ ಚನ್ನಮ್ಮನ ಅಂಚೆ ಚೀಟಿ ಬಿಡುಗಡೆ ಮಾಡುತ್ತಿರುವುದು ವೀರ ಮಹಿಳೆಗೆ ನೀಡಿದ ಗೌರವವಾಗಿದೆ’ ಎಂದು ಮಾಧ್ಯಮದವರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.