ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿನ ದೇಶಪಾಂಡೆ ಫೌಂಡೇಷನ್ ಸಭಾಂಗಣದಲ್ಲಿ ಶನಿವಾರ ಕೆಎಲ್‌ಇ ಸಂಸ್ಥೆಯ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಕಾಲೇಜು ಆಯೋಜಿಸಿದ್ದ ದೀಪ ಪ್ರಜ್ವಲನ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭ
ಹುಬ್ಬಳ್ಳಿ: ನಿಯತ್ತು, ಪ್ರಾಮಾಣಿಕತೆ, ಸಮಯಪ್ರಜ್ಞೆ ಹಾಗೂ ಬದ್ಧತೆಯಿಂದ ನರ್ಸಿಂಗ್ ವೃತ್ತಿ ಕೈಗೊಳ್ಳಬೇಕು ಎಂದು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ.ಶ್ರೀನಿವಾಸ್ ಎಲ್.ಡಿ ಹೇಳಿದರು.
ಇಲ್ಲಿನ ಬಿವಿಬಿ ಕಾಲೇಜು ಆವರಣದಲ್ಲಿನ ದೇಶಪಾಂಡೆ ಫೌಂಡೇಷನ್ ಸಭಾಂಗಣದಲ್ಲಿ ಶನಿವಾರ ಕೆಎಲ್‌ಇ ಸಂಸ್ಥೆಯ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಕಾಲೇಜು ಆಯೋಜಿಸಿದ್ದ ದೀಪ ಪ್ರಜ್ವಲನ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನರ್ಸಿಂಗ್ ವೃತ್ತಿ ಆಯ್ಕೆ ಮಾಡಿಕೊಂಡಿರುವವರು ಹೆಚ್ಚೆಚ್ಚು ಜ್ಞಾನ ಸಂಪಾದಿಸಬೇಕು, ಅತ್ಯುತ್ತಮ ಸಂವಹನ ಕೌಶಲ ಬೆಳೆಸಿಕೊಳ್ಳಬೇಕು ಹಾಗೂ ಕ್ಲಿನಿಕಲ್ ಕೌಶಲವನ್ನೂ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಸ್‌ಡಿಎಂ ವಿಶ್ವವಿದ್ಯಾಲಯದ ಉಪರೆಜಿಸ್ಟ್ರಾರ್ ಡಾ.ಅಜಂತಾ ಜಿ.ಎಸ್., ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಪ್ರಿನ್ಸಿಪಾಲ ಡಾ.ಪ್ರಶಾಂತ ಎ.ಎಸ್., ಕೆಎಲ್‌ಇ ಸಂಸ್ಥೆಯ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಪ್ರಿನ್ಸಿಪಾಲ ಡಾ.ಸಂಜಯ ಎಂ.ಪೀರಾಪುರ ಭಾಗವಹಿಸಿದ್ದರು. ಡಾ.ಆಶಾ ಭಟ್ಕಂಡೆ ಪ್ರಮಾಣ ವಚನ ಬೋಧಿಸಿದರು. ಡಾ.ಸೋಮಶೇಖರಯ್ಯ ಕಲ್ಮಠ ವಂದಿಸಿದರು, ಜೆ.ವೀಣಾ ಜೆಸ್ಸಿ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.