ಕೋನರೆಡ್ಡಿ
ಧಾರವಾಡ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹಿಂಬಾಗಿಲಿನ ಮೂಲಕ ಕ್ರಮಕ್ಕೆ ಕೈ ಹಾಕಿದರೆ ಬಿಜೆಪಿಯವರು ನಾಶವಾಗುತ್ತಾರೆ. ಚುನಾಯಿತ ಸರ್ಕಾರವನ್ನು ಬೀಳಿಸುವ ದುಸ್ಸಾಹಸಕ್ಕೆ ಬಿಜೆಪಿಯವರು ಕೈ ಹಾಕಬಾರದು’ ಎಂದು ಶಾಸಕ ಎನ್.ಎಚ್.ಕೋನರೆಡ್ಡಿ ಕುಟುಕಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರಾಜ್ಯಪಾಲರು ಕೇಂದ್ರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿರಬಹುದು. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದಿಲ್ಲ. ಸಂಪುಟದ ಸಚಿವರು, ಕಾಂಗ್ರೆಸ್ ಶಾಸಕರು, ಸಂಸದು ಎಲ್ಲರೂ ಅವರ ಬೆನ್ನಿಗೆ ನಿಂತಿದ್ದೇವೆ. ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಕಾನೂನು ಹೋರಾಟ ಮಾಡುತ್ತೇವೆ’ ಎಂದು ಪ್ರತಿಕ್ರಿಯಿಸಿದರು.
‘ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ 19ರಂದು ಪ್ರತಿಭಟನೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಜೊತೆ ಬಂಡೆಯಂತೆ ನಿಲ್ಲುತ್ತೇನೆ ಎಂದೂ ಅವರು ಹೇಳಿದ್ದಾರೆ. ಕಾಂಗ್ರೆಸ್‌ಗೆ ದೊಡ್ಡ ಶಕ್ತಿ ಇದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.