ADVERTISEMENT

ಯಾವುದೇ ಮಠವನ್ನು ನಿರ್ಲಕ್ಷಿಸುವುದಿಲ್ಲ : ಸಚಿವ ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 11:12 IST
Last Updated 19 ಡಿಸೆಂಬರ್ 2019, 11:12 IST
   

ಧಾರವಾಡ: 'ಯಾವುದೇ ಮಠವನ್ನು ನಿರ್ಲಕ್ಷಿಸುವುದಿಲ್ಲ. ಹಣಕಾಸಿನ ಹೊಂದಾಣಿಕೆಯಲ್ಲಿ ಸ್ವಲ್ಪ ತಡವಾಗಿದೆಯಷ್ಟೇ' ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮುಜರಾಯಿ ಇಲಾಖೆ ಖಾತೆಯಲ್ಲಿರುವ ಹಣವನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡಲಾಗುವುದು. ಇದನ್ನು ಮತ್ತೊಮ್ಮೆ ಪರಿಶೀಲಿಸಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಈ ಕುರಿತು ಮಠಾಧೀಶರೊಂದಿಗೂ ಚರ್ಚಿಸಿದ್ದಾರೆ' ಎಂದರು.

ಪೌರತ್ವ ಕಾಯ್ದೆ ವಿರೋಧಿಸಿ ಯು.ಟಿ.ಖಾದರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪೂಜಾರಿ, 'ಈ ಬಾರಿ ರಾಜ್ಯದಲ್ಲಿ ವರುಣನ ಕೃಪೆಯಿಂದ ಉತ್ತಮ ಮಳೆಯಾಗಿದೆ. ಹೀಗಾಗಿ ಬೆಂಕಿ ಬಿಳಿಸುವುದು ಅವರಿಗೆ ಗೊತ್ತಿದ್ದರೆ, ಅದರ ಶಮನ ಮಾಡುವ ಸಾಮರ್ಥ್ಯ ನಮಗೂ ಇದೆ' ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.