ADVERTISEMENT

ವಿನಯ ಕುಲಕರ್ಣಿ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ: ಡಿಕೆಶಿ ಆರೋಪ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 21:32 IST
Last Updated 17 ಡಿಸೆಂಬರ್ 2020, 21:32 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮಾತನಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮಾತನಾಡಿದರು.   

ಧಾರವಾಡ: ‘ಗ್ರಾಮ ಪಂಚಾಯಿತಿ ಚುನಾವಣೆ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ತಂಡವನ್ನು ರಚಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.

ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಸಿಬಿಐ ಬಂಧನಕ್ಕೊಳಗಾಗಿ ಸದ್ಯ ಜೈಲಿನಲ್ಲಿರುವ ವಿನಯ ಕುಲಕರ್ಣಿ ಅವರ ಮನೆಗೆ ಗುರುವಾರ ಭೇಟಿ ನೀಡಿದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ‘ನಮ್ಮದೇ ಆದ ಕೆಲ ರಾಜಕೀಯ ಲೆಕ್ಕಾಚಾರಗಳು ಇದ್ದವು. ಹೀಗಾಗಿ ವಿಳಂಬವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ನಂತರ ನೂತನ ತಂಡ ರಚಿಸಲಾಗುವುದು’ ಎಂದರು.

‘ವಿನಯ ಕುಲಕರ್ಣಿ ಅವರ ವಿರುದ್ಧ ರಾಜಕೀಯ ಪ್ರೇರಿತ ಷಡ್ಯಂತ್ರ ನಡೆದಿದೆ. ಪೊಲೀಸ್ ಹಾಗೂ ನ್ಯಾಯಾಲಯದ ವ್ಯವಸ್ಥೆ ಮೇಲೆ ನಮಗೆ ನಂಬಿಕೆ ಇದೆ. ಶೀಘ್ರವೇ ಅವರು ಆರೋಪಮುಕ್ತರಾಗಿ ಹೊರಬರುವ ವಿಶ್ವಾಸವಿದೆ’ ಎಂದರು.

ADVERTISEMENT

ಶ್ರೀನಿವಾಸ ಮಾನೆ, ದೀಪಕ ಚಿಂಚೋರೆ, ರಾಬರ್ಟ್ ದದ್ದಾಪುರಿ, ಶರಣಪ್ಪ ಕೊಟಗಿ, ಶಿವಶಂಕರ ಹಂಪಣ್ಣವರ, ಗೌರಿ ನಾಡಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.