ಧಾರವಾಡ: ಕೆಪಿಸಿಸಿ ರಾಜ್ಯ ವಕ್ತಾರ ಪಿ.ಎಚ್.ನೀರಲಕೇರಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ಧಾರೆ.
‘ಪಕ್ಷದ ತತ್ವ ಸಿದ್ದಾಂತಕ್ಕೆ ನಿಷ್ಠನಾಗಿ ಕಾರ್ಯನಿರ್ವಹಿಸಿದ್ದೇನೆ. ನಾಯಕರು ಕಡೆಗಣಿಸಿದ್ದರಿಂದ ನೋವಾಗಿದೆ. ಹೀಗಾಗಿ ರಾಜೀನಾಮೆಗೆ ನೀಡಿದ್ದೇನೆ. ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ನಡೆ ನಿರ್ಧರಿಸುತ್ತೇನೆ’ ಎಂದು ನೀರಲಕೇರಿ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.